ಬೆಂಗಳೂರು –
ಕೃಷಿ ಸಚಿವ ಚೆಲುವರಾಯಸ್ವಾಮಿ ಅವರ ವಿರುದ್ಧ ಬರೆದಿರುವ ಪತ್ರದ ಬಗ್ಗೆ ಪೊಲೀಸರಿಗೆ ತನಿಖೆ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪ ಅವರ ಪುಣ್ಯತಿಥಿಯ ಅಂಗ ವಾಗಿ ಅವರ ಪ್ರತಿಮೆಯ ಬಳಿ ಅವರ ಭಾವಚಿ ತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
ಪತ್ರ ಅಸಲಿ ಎಂದು ಮಾಜಿ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದಾರೆ ಎಂಬ ಬಗ್ಗೆ ಉತ್ತರಿಸಿ ಈ ರಾಮ ನಗರದ ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್ ಕುಮಾರ್ ಅವರು ಪತ್ರವನ್ನು ಅಧಿಕಾರಿಗಳು ಬರೆದಿಲ್ಲ ಎಂದು ದೂರು ನೀಡಿದ್ದಾರೆ.ಪೊಲೀಸರು ತನಿಖೆ ಮಾಡಿ ಸತ್ಯ ಬಯಲಿಗೆಳೆ ಯಲು ಸೂಚಿಸಲಾಗಿದೆ ಎಂದರು
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..