ಬೆಂಗಳೂರು –
ಈಗಾಗಲೇ ಆರನೇ ವೇತನ ಆಯೋಗದ ಅವಧಿ ಮುಕ್ತಾಯ ವಾಗಿದ್ದು ಜುಲೈ 31ಕ್ಕೆ ಕೊನೆಗೊಂಡಿದ್ದು 7ನೇ ವೇತನ ಆಯೋಗದ ರಚನೆಯ ಮುಖ್ಯಸ್ಥರು ಸರ್ಕಾರಿ ನೌಕರರು ತಮ್ಮ ವೇತನದಲ್ಲಿ ಶೇ.20ರಿಂದ 30ರಷ್ಟು ಹೆಚ್ಚಳಕ್ಕೆ ಒತ್ತಾಯಿಸುತ್ತಿದ್ದಾರೆ.
ವಿಶೇಷವಾಗಿ ಚುನಾವಣಾ ವರ್ಷದಲ್ಲಿ ನೌಕರರ ಬೇಡಿಕೆ ಯನ್ನು ನಿರ್ಲಕ್ಷಿಸಲು ಸರ್ಕಾರಕ್ಕೆ ಸಾಧ್ಯವಾಗದ ಕಾರಣ ಈ ಬೃಹತ್ ಮೊತ್ತವನ್ನು ತೂಗಿಸುವುದು ದೊಡ್ಡ ಸವಾಲಾಗಿದೆ. ಅವರ ಬೇಡಿಕೆಗೆ ಅನುಗುಣವಾಗಿ ವೇತನವನ್ನು ಪರಿಷ್ಕರಿ ಸಿದರೆ ನೌಕರರಿಗೆ ಕೇಡರ್ ಗೆ ಅನುಗುಣವಾಗಿ 10,000 ರಿಂದ 50,000 ರೂ. ವರೆಗೆ ವೇತನ ಹೆಚ್ಚಿ,ಸಬೇಕಾದ ಅನಿವಾರ್ಯತೆ ಸೃಷ್ಟಿಯಾಗುತ್ತದೆ.
2017ರಲ್ಲಿ ಆಗಿನ ರಾಜ್ಯ ಸರ್ಕಾರವು ಮಾಜಿ ಐಎಎಸ್ ಅಧಿಕಾರಿ ಎಂಆರ್ ಶ್ರೀನಿವಾಸ ಮೂರ್ತಿ ಅವರನ್ನು ಆರನೇ ವೇತನ ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಿತ್ತು. ಮೊದಲ ವೇತನ ಆಯೋಗವನ್ನು 1966 ರಲ್ಲಿ ರಚಿಸಲಾ ಗಿತ್ತು 2017ರಲ್ಲಿ ಆರನೇ ವೇತನ ಆಯೋಗವು ಮೂಲ ವೇತನದಲ್ಲಿ ಶೇ.29ರಷ್ಟು ವೇತನ ಪರಿಷ್ಕರಣೆಗೆ ಶಿಫಾರಸು ಮಾಡಿತ್ತು ವೇತನ ಪರಿಷ್ಕರಣೆ ಐದು ವರ್ಷಕ್ಕೊಮ್ಮೆ ಮಾಡಬೇಕು.
ಕೇಂದ್ರ ಸರ್ಕಾರ ಮತ್ತು ಕೇರಳ ಆಂಧ್ರಪ್ರದೇಶ ಮತ್ತು ತಮಿಳುನಾಡು ಸೇರಿದಂತೆ ಇತರ ರಾಜ್ಯ ಸರ್ಕಾರಿ ನೌಕರ ರಿಗೆ ಹೋಲಿಸಿದರೆ ರಾಜ್ಯ ಸರ್ಕಾರಿ ನೌಕರರ ವೇತನ ಪ್ರಮಾಣವು ತುಂಬಾ ಕಡಿಮೆಯಾಗಿದೆ.ಆರನೇ ವೇತನ ಆಯೋಗದ ಅವಧಿ ಮುಕ್ತಾಯಗೊಂಡಿದ್ದು ಸರ್ಕಾರಿ ಸಿಬ್ಬಂದಿಗಳು ವೇತನ ಹೆಚ್ಚಳಕ್ಕೆ ಒತ್ತಡ ಹೇರುತ್ತಿದ್ದಾರೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಸುಮಾರು 12 ಸಾವಿರ ಕೋಟಿ ರೂ. ಹೊರೆ ಬೀಳುವ ಸಾಧ್ಯತೆ ಇದೆ.2023ರ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರಕ್ಕೆ ದೊಡ್ಡ ಸವಾಲು ಎದುರಾಗಿದ್ದು ಆರನೇ ವೇತನ ಆಯೋಗದ ಅವಧಿ ಜುಲೈ 31ಕ್ಕೆ ಕೊನೆಗೊಂ ಡಿದ್ದು 7ನೇ ವೇತನ ಆಯೋಗದ ರಚನೆಯ ಮುಖ್ಯಸ್ಥರು ಸರ್ಕಾರಿ ನೌಕರರು ತಮ್ಮ ವೇತನದಲ್ಲಿ ಶೇ.20ರಿಂದ 30 ರಷ್ಟು ಹೆಚ್ಚಳಕ್ಕೆ ಒತ್ತಾಯಿಸುತ್ತಿದ್ದಾರೆ