ಮೆಟ್ರೊ ಪಿಲ್ಲರ್ ಕುಸಿತದಲ್ಲಿ ಮೃತಪಟ್ಟ ಕುಟುಂಬಗಳಿಗೆ 20 ಲಕ್ಷ ರೂಪಾಯಿ ಪರಿಹಾರ ಘೋಷಣೆ – ಧಾರವಾಡದಲ್ಲಿ ಮೃತ ಕುಟುಂಬಗಳಿಗೆ ಪರಿಹಾರ ಘೋಷಣೆ ಮಾಡಿದ ಮುಖ್ಯಮಂತ್ರಿ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಸೂಕ್ತಕ್ರಮಕ್ಕೆ ಸೂಚನೆ

Suddi Sante Desk
ಮೆಟ್ರೊ ಪಿಲ್ಲರ್ ಕುಸಿತದಲ್ಲಿ ಮೃತಪಟ್ಟ ಕುಟುಂಬಗಳಿಗೆ 20 ಲಕ್ಷ ರೂಪಾಯಿ ಪರಿಹಾರ ಘೋಷಣೆ – ಧಾರವಾಡದಲ್ಲಿ ಮೃತ ಕುಟುಂಬಗಳಿಗೆ ಪರಿಹಾರ ಘೋಷಣೆ ಮಾಡಿದ ಮುಖ್ಯಮಂತ್ರಿ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಸೂಕ್ತಕ್ರಮಕ್ಕೆ ಸೂಚನೆ

ಧಾರವಾಡ

ಹೌದು ಬೆಂಗಳೂರಿನ ನಾಗವಾರ ಬಳಿ ನಿರ್ಮಾಣದ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್ ಕುಸಿತ ಪ್ರಕರಣದಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ಮುಖ್ಯಮಂತ್ರಿ ಪರಿಹಾರವನ್ನು ಘೋಷಣೆ ಮಾಡಿದ್ದಾರೆ. ಮೃತರ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 10 ಲಕ್ಷ ರೂಪಾಯಿ ಬಿಎಂಆರ್ ಸಿಎಲ್ ನಿಂದ 20 ಲಕ್ಷ ರೂ ಪರಿಹಾರವನ್ನು ಘೋಷಣೆ ಮಾಡಲಾಗಿದೆ. ನಿರ್ಮಾಣ ಹಂತದಲ್ಲಿನ ಮೆಟ್ರೋ ಪಿಲ್ಲರ್ ದಿಢೀರ್ ಕುಸಿದುಬಿದ್ದ ಪರಿಣಾಮ ತಾಯಿ ಹಾಗೂ ಎರಡು ವರ್ಷದ ಮಗು ಮೃತರಾಗಿದ್ದಾರೆ.

 

 

ಈ ಒಂದು ಕುಟುಂಬಸ್ಥರಿಗೆ ಸಿಎಂ ಪರಿಹಾರ ನಿಧಿಯಿಂದ ತಲಾ 10 ಲಕ್ಷ ರೂಪಾಯಿ ಹಾಗೂ ಬಿಎಂಆರ್ ಸಿಎಲ್ ನಿಂದ 20 ಲಕ್ಷ ರೂ. ಪರಿಹಾರವನ್ನು ಪ್ರಕಟಿಸಲಾಗಿದೆ.ಎಚ್ಆರ್ ಲೇಔಟ್ ಬಳಿ ಮೆಟ್ರೋ ಕಾಮಗಾರಿ ವೇಳೆ ಪಿಲ್ಲರ್ ಗೆ ನಿಲ್ಲಿಸಿದಂತಹ ಕಬ್ಬಿಣದ ರಾಡ್ ಗಳು ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ಹಾಗೂ ಮಗುವಿನ ಮೇಲೆ ಬಿದಿದ್ದವು ಇದರಿಂದಾಗಿ ಗಂಭೀರವಾಗಿ ಗಾಯಗೊಂಡಿದ್ದ ತೇಜಸ್ವಿನಿ (35) ಹಾಗೂ ವಿಹಾನ್ (2 ವರ್ಷ 6 ತಿಂಗಳು) ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ

ತಂದೆ ಹಾಗೂ ಮಗಳು ಪ್ರಾಣಪಾಯದಿಂದ ಪಾರಾಗಿದ್ದಾರೆ.ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ ಬಿಎಂಆರ್ ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಜುಂ ಪರ್ವೇಜ್ ಇದೊಂದು ದುರಾದೃಷ್ಟಕರ ಘಟನೆ ಯಾಗಿದ್ದು ಮೃತರ ಕುಟುಂಬಸ್ಥರಿಗೆ 20 ಲಕ್ಷ ಪರಿಹಾರ ಒದಗಿಸಲಾಗುವುದು ಎಂದರು

ಮೆಟ್ರೋ ನಿರ್ಮಾಣದಲ್ಲಿ ಸಾಧ್ಯವಾದಷ್ಟು ಅತ್ಯಂತ ಹೆಚ್ಚಿನ ಗುಣಮಟ್ಟವನ್ನು ಅನುಸರಿಸುತ್ತಿ ದ್ದೇವೆ ಘಟನೆ ಸಂಬಂಧ ವಿಸ್ತೃತವಾಗಿ ತನಿಖೆ ನಡೆಸಲಾಗುವುದು ಒಂದು ವೇಳೆ ತಾಂತ್ರಿಕ ದೋಷ ಅಥವಾ ಕಾರ್ಮಿಕರ ತಪ್ಪಿನಿಂದಾದ ಅವಘಡ ಎಂದು ಕಂಡುಬಂದಲ್ಲಿ ಮುಂದೆ ಇಂತಹ ಘಟನೆ ಸಂಭವಿಸದಂತೆ ಕ್ರಮ ಕೈಗೊ ಳ್ಳಲಾಗುವುದು ಎಂದರು.ಇನ್ನೂ ಇತ್ತ ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೃತರ ಕುಟುಂಬಸ್ಥರಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಹಾಗೂ ಘಟನೆ ಸಂಬಂಧ ಸಮಗ್ರವಾಗಿ ತನಿಖೆ ನಡೆಸಿ ತಪ್ಪತಸ್ಥ ಅಧಿಕಾರಿಗಳ ಮೇಲೆ ಕ್ರಮವನ್ನು ಕೈಗೊಳ್ಳುವಂತೆ ಸೂಚನೆ ನೀಡೊದಾಗಿ ಸುದ್ದಿ ಸಂತೆ ನ್ಯೂಸ್ ಗೆ ಹೇಳಿದರು.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು ಮತ್ತು ಧಾರವಾಡ…..

 

 

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.