ಬೆಂಗಳೂರು –
2021-22ನೇ ಶೈಕ್ಷಣಿಕ ಸಾಲಿನಲ್ಲಿ ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಮಗ್ರ ಶಿಕ್ಷಣ ಕರ್ನಾಟಕ ವತಿಯಿಂದ ನೀಡುವ ಸ್ವಚ್ಛ ವಿದ್ಯಾಲಯ ಪುರಸ್ಕಾರಕ್ಕೆ ರಾಜ್ಯ 26 ಶಾಲೆಗಳನ್ನು ಆಯ್ಕೆ ಮಾಡಿ ಪ್ರಶಸ್ತಿಯನ್ನು ನೀಡಲಾಗಿದೆ.
ಇನ್ನೂ ಕಾರ್ಯಕ್ರಮದಲ್ಲಿ ರಾಜ್ಯದ ಸರಕಾರಿ,ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆ ಗಳು ಸೇರಿ ಒಟ್ಟು 60,293 ಶಾಲೆಗಳು ಆನ್ಲೈನ್ ವೆಬ್ ಪೋರ್ಟಲ್ನಲ್ಲಿ ನೋಂದಣಿ ಆಗಿದ್ದವು ಎಂದು ಶಿಕ್ಷಣ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.