ಬೆಂಗಳೂರು –
ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸಿದ 2012-13 ಹಾಗೂ 2014-15ರ ಸಹ ಶಿಕ್ಷಕರ ನೇಮಕಾತಿ ಯಲ್ಲಿನ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಲಾಗಿದ್ದು 38 ಶಿಕ್ಷಕರನ್ನು ಬಂಧಿಸ ಲಾಗಿದೆ.ಸಹ ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಕುರಿತು ಆಗಸ್ಟ್ 12ರಂದು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಬಳಿಕ ಇದೇ ಅಕ್ರಮಕ್ಕೆ ಸಂಬಂಧಿ ಸಿದಂತೆ ಸೆ. 29ರಂದು ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಬಳಿಕ ಈ ಪ್ರಕರಣಗಳ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವರ್ಗಾವಣೆ ಮಾಡಿರುತ್ತದೆ. ಈ ಪ್ರಕರಣಗಳ ತನಿಖೆ ನಡೆಸಿದ ಸಿಐಡಿ ಇದುವರೆಗೆ ಶಿಕ್ಷಕರು ಮತ್ತು ನಿರ್ದೇಶಕರು ಸೇರಿದಂತೆ ಒಟ್ಟು 22 ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸುತ್ತಿದೆ ಈ ಮಧ್ಯೆ ಸಾರ್ವಜನಿಕ ಶಿಕ್ಷಣ ಇಲಾಖೆ ಇನ್ನಷ್ಟು ಶಿಕ್ಷಕರು ಅಕ್ರಮವಾಗಿ ನೇಮಕವಾಗಿರುತ್ತಾರೆ ಎಂದು ನೀಡಿದ ವರದಿ ಮೇರೆಗೆ ಸಿಐಡಿ ಘಟಕ ದಿಂದ ಆರೋಪಿಗಳ ಪತ್ತೆಗಾಗಿ 30 ವಿಶೇಷ ತಂಡಗಳನ್ನು ರಚಿಸಿದ್ದು
ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ದಕ್ಷಿಣ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಏಕಕಾಲದಲ್ಲಿ 51 ಸ್ಥಳಗಳಲ್ಲಿ ದಾಳಿ ನಡೆಸಿ ಅಕ್ರಮವಾಗಿ ನೇಮಕ ವಾಗಿದ್ದ 38 ಜನ ಶಿಕ್ಷಕರನ್ನು ಬಂಧಿಸಲಾಗಿದೆ.
ಕೋಲಾರ ಜಿಲ್ಲೆಯಿಂದ 24, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಮತ್ತು ಚಿತ್ರದುರ್ಗ ಜಿಲ್ಲೆಯಿಂದ ತಲಾ ಐವರು ಶಿಕ್ಷಕರನ್ನು ಬಂಧಿಸಲಾಗಿದ್ದು ಉಳಿದ ಆರೋಪಿಗಳ ಪತ್ತೆಕಾರ್ಯ ಮುಂದುವ ರಿದಿದೆ ಎಂದು ಸಿಐಡಿ ಅಧಿಕಾರಿಗಳು ತಿಳಿಸಿದ್ದಾರೆ
ಸಿಐಡಿಯ ಈ ಕಾರ್ಯಾಚರಣೆಯಲ್ಲಿ 18 ಡಿವೈಎಸ್‌ಪಿ, 14 ಪೊಲೀಸ್ ಇನ್ಸ್ ಪೆಕ್ಟರ್ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.