ದಾವಣಗೆರೆ –
500 ರೂ. ನೋಟು ತೋರಿಸಿ, 4.85 ಲಕ್ಷ ರೂಪಾಯಿಗಳನ್ನು ಖದೀಮರು ಲಪಟಾಯಿಸಿರುವ ಘಟನೆ ಜಿಲ್ಲೆ ದಾವಣಗೆರಿಯ ಹೊನ್ನಾಳಿಯಲ್ಲಿ ನಡೆದಿದೆ.

ಹೊನ್ನಾಳಿಯ ಕೆನರಾ ಬ್ಯಾಂಕ್ ಬಳಿ ಈ ಘಟನೆ ನಡೆದಿದ್ದು, ಘಂಟ್ಯಾಪುರದ ಚಂದ್ರನಾಯ್ಕ ಹಣ ಕಳೆದುಕೊಂಡ ವ್ಯಕ್ತಿಯಾಗಿದ್ದಾರೆ. ಚಂದ್ರಾನಾಯ್ಕ ಅವರ ಗಮನ ಬೇರೆಡೆ ಸೆಳೆದು 4.85 ರೂ. ಲಕ್ಷ ಹಣವನ್ನು ಖತರ್ನಾಕ್ ಕಳ್ಳರು ದೋಚಿದ್ದಾರೆ.

ಚಂದ್ರಾನಾಯ್ಕ ಕೆನರಾ ಬ್ಯಾಂಕಿನಿಂದ ಹಣ ಬಿಡಿಸಿಕೊಂಡು ಮರಳುತ್ತಿದ್ದರು. ಇದನ್ನು ಗಮನಿಸಿ ಚಂದ್ರನಾಯ್ಕ ಅವರನ್ನು ಖದೀಮರು ಹಿಂಬಾಲಿಸಿ, 500 ನೋಟನ್ನು ಕೆಳಗೆ ಬೀಳಿಸಿ ಚಂದ್ರನಾಯ್ಕರನ್ನು ಯಾಮಾರಿಸಿ ಹಣ ಕಳ್ಳತನ ಮಾಡಿದ್ದಾರೆ.

ಕಳ್ಳರ ಈ ಕೃತ್ಯ ಸಿಸಿ ಕ್ಯಾಮರಗಳಲ್ಲಿ ದೃಶ್ಯಾವಳಿ ಸೆರೆಯಾಗಿದ್ದು, ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕಳ್ಳರ ಬಂಧನಕ್ಕೆ ಬಲೆ ಬೀಸಿದ್ದಾರೆ.