This is the title of the web page
This is the title of the web page

Live Stream

[ytplayer id=’1198′]

May 2025
T F S S M T W
1234567
891011121314
15161718192021
22232425262728
293031  

| Latest Version 8.0.1 |

State News

5,8,9,11ನೇ ತರಗತಿಗಳ ಪರೀಕ್ಷೆಗೆ ಅನುಮತಿ ಬೆನ್ನಲ್ಲೇ ಪರೀಕ್ಷಾ ವೇಳಾಪಟ್ಟಿ ಪ್ರಕಟ – ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ ಬೆನ್ನಲ್ಲೇ ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ ಶಿಕ್ಷಣ ಇಲಾಖೆ…..

5,8,9,11ನೇ ತರಗತಿಗಳ ಪರೀಕ್ಷೆಗೆ ಅನುಮತಿ ಬೆನ್ನಲ್ಲೇ ಪರೀಕ್ಷಾ ವೇಳಾಪಟ್ಟಿ ಪ್ರಕಟ – ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ ಬೆನ್ನಲ್ಲೇ ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ ಶಿಕ್ಷಣ ಇಲಾಖೆ…..
WhatsApp Group Join Now
Telegram Group Join Now

ಬೆಂಗಳೂರು

5,8,9,11ನೇ ತರಗತಿಗಳ ಪರೀಕ್ಷೆಗೆ ಅನುಮತಿ ಬೆನ್ನಲ್ಲೇ ಪರೀಕ್ಷಾ ವೇಳಾಪಟ್ಟಿ ಪ್ರಕಟ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ ಬೆನ್ನಲ್ಲೇ ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ ಶಿಕ್ಷಣ ಇಲಾಖೆ ಹೌದು

5,8,9,11ನೇ ತರಗತಿಗಳಿಗೆ ಪರೀಕ್ಷೆಯನ್ನು ನಡೆಸಲು ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ ಬೆನ್ನಲ್ಲೇ ಇತ್ತ ಶಿಕ್ಷಣ ಇಲಾಖೆ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.ಹೌದು 5, 8, 9ನೇ ತರಗತಿಗೆ ಮೌಲ್ಯಾಂಕನ ಪರೀಕ್ಷೆ ನಡೆಸಲು ಕರ್ನಾಟಕ ಶಿಕ್ಷಣ ಇಲಾಖೆ ವೇಳಾಪಟ್ಟಿ ಪ್ರಕಟಿಸಿದೆ.ಮಾರ್ಚ್‌ 25 ರಿಂದ ಬಾಕಿ ವಿಷಯಗಳಿಗೆ 28ರ ವರೆಗೆ ಪರೀಕ್ಷೆಗಳು ನಡೆಯಲಿವೆ.

ಎಸ್ಎಸ್ಎಲ್ಸಿ ಪರೀಕ್ಷೆ ಇಲ್ಲದ ದಿನ ಬೆಳಿಗ್ಗೆ ಬೋರ್ಡ್ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಪ್ಲಾನ್ ಮಾಡಿದೆ.ಇನ್ನು ಉಳಿದ ದಿನ ಮಧ್ಯಾಹ್ನ ಅವಧಿಯಲ್ಲೇ ಪರೀಕ್ಷೆ ನಡೆಸಲು ತೀರ್ಮಾನಿಸ ಲಾಗಿದೆ.ಮಾರ್ಚ್ 25ನೇ ರಿಂದ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಗಳು ಆರಂಭವಾಗುತ್ತಿದ್ದು ಪರೀಕ್ಷೆಗಳಿರುವ ದಿನಾಂಕ 25-3-24ರ ಸೋಮ ವಾರ ಮತ್ತು 27-3-24ರ ಬುಧವಾರದಂದು ಮಧ್ಯಾಹ್ನದ ಅವಧಿಯಲ್ಲಿ ಹಾಗೂ SSLC

ಪರೀಕ್ಷೆಗಳು ಇಲ್ಲದಿರುವ ದಿನಾಂಕ 26-3-24 ರ ಮಂಗಳವಾರ ಮತ್ತು 28-3-24 ರ ಗುರುವಾರ ದಂದು ಬೆಳಗಿನ ಅವಧಿಯಲ್ಲಿ 5, 8 ಮತ್ತು 9ನೇ ತರಗತಿಯ ಮೌಲ್ಯಾಂಕವನ್ನು ನಡೆಸಲಾಗುತ್ತದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.ರಾಜ್ಯ ಪಠ್ಯಕ್ರ ಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 5, 8 ಮತ್ತು 9ನೇ ತರಗತಿಗಳ ವಿದ್ಯಾರ್ಥಿಗಳಿಗೆ 2023-24ನೇ ಸಾಲಿನ ಸಂಕಲನಾತ್ಮಕ ಮೌಲ್ಯ ಮಾಪನ-2 (SA-2) ಮೌಲ್ಯಾಂಕನ ನಡೆಸುವ

ಸಂಬಂಧ ಸರ್ವೋಚ್ಛ ನ್ಯಾಯಾಲಯದಲ್ಲಿ ಎಸ್.ಎಲ್.ಪಿ ಸಂಖ್ಯೆ: 6256/2024, ಎಸ್.ಎಲ್.ಪಿ ಸಂಖ್ಯೆ: 6257/2024 ಮತ್ತು ಡೈರಿ ಸಂಖ್ಯೆ: 11192/2024 ದಾವೆಗಳನ್ನು ಹೂಡಿದ್ದು, ಸದರಿ ದಾವೆಗಳನ್ನು ವಿಚಾರಣೆ ನಡೆಸಿ, ಈ ಹಿಂದೆ ರಾಜ್ಯ ಉಚ್ಛ ನ್ಯಾಯಾಲಯದ ದ್ವಿಸದಸ್ಯ ಪೀಠವು ಮೌಲ್ಯಾಂಕನವನ್ನು ಮುಂದುವರೆಸುವಂತೆ ನೀಡಿದ್ದ ಮಧ್ಯಂತರ ತೀರ್ಪನ್ನು ರದ್ದುಪಡಿಸಿರುತ್ತದೆ

ಮತ್ತು ಪ್ರಕರಣವನ್ನು ರಾಜ್ಯ ಉಚ್ಛ ನ್ಯಾಯಾಲಯ ವಿಭಾಗೀಯ ಪೀಠಕ್ಕೆ ರವಾನಿಸಿತ್ತು.ಈ ಹಿನ್ನೆಲೆಯಲ್ಲಿ ದಿನಾಂಕ: 13-3-2024ರಿಂದ ನಡೆಯಬೇಕಾಗಿದ್ದ 5.8 ಮತ್ತು 9ನೇ ತರಗತಿಗಳ SA-2 ಮೌಲ್ಯಾಂಕನವನ್ನು ಮುಂದಿನ ಆದೇಶದವರೆಗೆ ಮುಂದೂಡುವಂತೆ ಶಾಲೆಗಳಿಗೆ ಸೂಚಿಸಲಾಗಿತ್ತು. ಮುಂದುವರೆದು, ರಾಜ್ಯ ಘನ ಉಚ್ಛ ನ್ಯಾಯಾಲಯದ ವಿಭಾಗೀಯ ಪೀಠವು ಸದರಿ ದಾವೆಯ ಪ್ರಕರಣವನ್ನು ವಿಚಾರಣೆ ನಡೆಸಿ

ದಿನಾಂಕ: 22-3-2024ರಂದು ಅಂತಿಮ ತೀರ್ಪು ನೀಡಿದ್ದು, 5, 8 ಮತ್ತು 9ನೇ ತರಗತಿಗಳು 2023-24ನೇ ಸಾಲಿನ ಸಂಕಲನಾತ್ಮಕ ಮೌಲ್ಯಮಾಪನ 2 (SA-2) ಮೌಲ್ಯಾಂಕನ ಕಾರ್ಯವನ್ನು ಉಳಿದ ವಿಷಯಗಳಿಗೆ ಮುಂದುವರೆಸಲು ಸೂಚಿಸಿ ಆದೇಶಿಸಿರುತ್ತದೆ.

ಅದರಂತೆ ಸದರಿ ಮೌಲ್ಯಾಂಕನ ಕಾರ್ಯವನ್ನು ವಿದ್ಯಾರ್ಥಿಗಳ ಅಭ್ಯಾಸದ ಹಿತದೃಷ್ಟಿಯಿಂದ ದಿನಾಂಕ: 25-3-2024ರಿಂದ ಪ್ರಾರಂಭಿಸಲು ಕ್ರಮವಹಿಸಲಾಗಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk