ಹುಬ್ಬಳ್ಳಿಗೆ ಪ್ರತಿಷ್ಠಿತ ಕಂಪನಿಗಳಿಂದ‌ – 6 ಸಾವಿರ ಕೋಟಿ ಬಂಡವಾಳ ಹೂಡಿಕೆ

Suddi Sante Desk

ಹುಬ್ಬಳ್ಳಿ –

ಹುಬ್ಬಳ್ಳಿಯಲ್ಲಿ ನಡೆದ ಇನ್ವೆಸ್ಟ್ ಕರ್ನಾಟಕ ಸಮ್ಮೇಳನದಲ್ಲಿ ಆದ ಒಡಂಬಡಿಕೆಯಂತೆ ಪ್ರತಿಷ್ಠಿತ ಕಂಪನಿಗಳು ಹುಬ್ಬಳ್ಳಿ ನಗರ ಸೇರಿದಂತೆ ಧಾರವಾಡ ಜಿಲ್ಲೆಯ ಹಲವು ಭಾಗದಲ್ಲಿ 6 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡಲಿವೆ ಎಂದು ಬೃಹತ್ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ಮಹಾನಗರ ಪಾಲಿಕೆ ಅನುದಾನದಲ್ಲಿ ಉದಯನಗರದ ಶಿವ ಗಣೇಶ ದೇವಸ್ಥಾನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸಭಾ ಭವನ ಉದ್ಘಾಟಿಸಿ ಅವರು ಮಾತನಾಡಿ ಬಂಡವಾಳ ಹೂಡಿಕೆಯಿಂದ ಐ.ಟಿ. ಮೆಕಾನಿಕಲ್ ಇಂಜಿನಿಯರಿಂಗ್, ಎಫ್.ಎಂ.ಜಿ.ಸಿ ಸೇರಿಯ ಹಲವು ವಿಭಾಗಗಳಲ್ಲಿ ಉದ್ಯೋಗ ಅವಕಾಶಗಳು ಸೃಷ್ಠಿಯಾಗಲಿವೆ. ಜಿಲ್ಲೆಯ 20 ರಿಂದ 30 ಸಾವಿರ ಯುವಕರಿಗೆ ಸ್ಥಳೀಯವಾಗಿ ಉದ್ಯೋಗ ದೊರಕಲಿದೆ. ಯುವಜನತೆ ಉದ್ಯೋಗ ಅರಿಸಿ ಬೆಂಗಳೂರು ಸೇರಿದಂತೆ ವಿವಿಧ ನಗರಗಳಿಗೆ ವಲಸೆ ಹೋಗುವುದು ತಪ್ಪಲಿದೆ ಎಂದರು.

ಇನ್ನೂ ಅವಳಿ ನಗರದಲ್ಲಿ ನಗರ ವಿಕಾಸ, ಸ್ಮಾರ್ಟ್ ಸಿಟಿ. ಲೋಕೋಪಯೋಗಿ ಸೇರಿದಂತೆ ಸಾವಿರಾರು ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿವೆ. ಅವಳಿ ನಗರವನ್ನು ಸುಂದರ ಹಾಗೂ ಸುಸ್ಥಿರ ನಗರವನ್ನಾಗಿ ಮಾರ್ಪಡಿಸಲಾಗುವುದು. ನಗರದ ಪ್ರತಿಯೊಂದು ಬಡಾವಣೆಯ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುತ್ತದೆ. ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನದಲ್ಲಿ ಹುಬ್ಬಳ್ಳಿ ಧಾರವಾಡ ರಾಜ್ಯಕ್ಕೆ ಪ್ರಥಮ ಸ್ಥಾನದಲ್ಲಿದೆ ಎಂದು ಹೇಳಿದರು.
3 ಕೋಟಿ ರೂಪಾಯಿ ವೆಚ್ಚದ ರಸ್ತೆ ಕಾಮಗಾರಿಗೆ ಚಾಲನೆ ನೀಡಿದರು.

ವಾರ್ಡ್ ನಂ 33 ರ ಮಯೂರಿ ಎಸ್ಟೇಟ್ ನಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ 3 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ರಸ್ತೆ ಕಾಮಗಾರಿಗೆ ಸಚಿವ ಜಗದೀಶ್ ಶೆಟ್ಟರ್ ಭೂಮಿ ಪೂಜೆ ನೆರವೇರಿಸಿದರು. ನಂತರ ಇಂದಿರಾ ನಗರ ರಸ್ತೆ ಕಾಮಗಾರಿಯನ್ನು ವೀಕ್ಷಿಸಿದರು.ಒಟ್ಟು 3 ಕಿ.ಮೀ. ಉದ್ದದ ರಸ್ತೆ ಅಭಿವೃದ್ಧಿ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ ಎಂದರು.ಜಗದೀಶ್ ಶೆಟ್ಟರ್ ರೊಂದಿಗೆ ಮಾಜಿ ಮಹಾಪೌರ ವೀರಣ್ಣ ಸವಡಿ, ಮುಖಂಡರುಗಳಾದ ಮಲ್ಲಿಕಾರ್ಜುನ ಸಾಹುಕಾರ, ಸಂತೋಷ್ ಚವ್ಹಾಣ್ , ಲೋಕೋಪಯೋಗಿ ಇಲಾಖೆ ಹಿರಿಯ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.