ಹುಬ್ಬಳ್ಳಿ –
ನಿಷೇಧಿತ ಪ್ಲಾಸ್ಟಿಕ್ ನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಹುಬ್ಬಳ್ಳಿಯಲ್ಲಿ ಪಾಲಿಕೆಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಹುಬ್ಬಳ್ಳಿ ಧಾರವಾಡ ಪಾಲಿಕೆ ಅಧಿಕಾರಿಗಳ ತಂಡ ಅಂಗಡಿ, ಬೇಕರಿ, ವಾಣಿಜ್ಯ ಮಳಿಗೆಗಳಲ್ಲಿ ತಪಾಸಣೆ ನಡೆಸಿ, 70 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡು ಮಾಲಿಕರ ಮೇಲೆ 65,500 ರೂ ದಂಡ ವಿಧಿಸಿದ್ದಾರೆ.

ನಿಷೇಧಿತ ಪ್ಲಾಸಿಕ್ ಮಾರಾಟ ತಡೆಯಲು ವಲಯವಾರು ಅಧಿಕಾರಿಗಳ ತಂಡ ರಚಿಸಿ ಜ.21 ವಿಶೇಷ ಕಾರ್ಯಾಚರಣೆ ನಡೆಸಲಾಯಿತು. ನಗರದಲ್ಲಿ ಪ್ಲಾಸ್ಟಿಕ್ ಬಳಕೆ ಹೆಚ್ಚಾಗಿದ್ದು ಪರಿಸರದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿದೆ.

ಘನತ್ಯಾಜ್ಯ ಪ್ರಮಾಣ ಹೆಚ್ಚಾಗಿದೆ. ಈ ಒಂದು ಹಿನ್ನಲೆಯಲ್ಲಿ ಘನತ್ಯಾಜ್ಯ ನಿರ್ವಹಣಾ ನಿಯಮ 2016 ರನ್ವಯ ಅಂಗಡಿ ಮಾಲಿಕರಿಗೆ ದಂಡ ವಿಧಿಸಿ ಎಚ್ಚರಿಕೆ ನೋಟಿಸ್ ನೀಡಲಾಗಿದೆ.

ಕಾರ್ಯಚರಣೆ ಮುಂದುವರಿಯಲಿದೆ ಎಂದು ಪಾಲಿಕೆಯ ಅಧಿಕಾರಿಗಳು ತಿಳಿಸಿದ್ದಾರೆ. ಇದೇ ವೇಳೆ ಸಾರ್ವಜನಿಕರು ನಿಷೇಧತ ಪ್ಲಾಸ್ಟಿಕ್ ಬಳಸಬಾರದು ಸಹಕರಿಸಬೇಕೆಂದು ಪಾಲಿಕೆಯ ಅಧಿಕಾರಿಗಳು ಹೇಳಿದ್ದಾರೆ.