This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ರಾಜ್ಯದಲ್ಲಿ ಶಾಲಾ ಆರಂಭಕ್ಕೆ ಹೊರಬಿತ್ತು ಆದೇಶ – ಆಗಸ್ಟ್ 23 ರಿಂದ 9,10 ತರಗತಿಗಳು ಆರಂಭ

WhatsApp Group Join Now
Telegram Group Join Now

ಬೆಂಗಳೂರು –

ಒಂದು ಕಡೆ ಮೂರನೆಯ ಅಲೆಯ ಆತಂಕ ಮತ್ತೊಂದು ಕಡೆಗೆ ಕುಂಠಿತವಾಗುತ್ತಿರುವ ಮಕ್ಕಳ ಕಲಿಕಾ ಗುಣಮಟ್ಟ ಇದೆಲ್ಲದರ ನಡುವೆ ಕೊನೆಗೂ ರಾಜ್ಯದಲ್ಲಿ ರಾಜ್ಯ ಸರ್ಕಾರ ಶಿಕ್ಷಣ ಇಲಾಖೆ ಶಾಲೆಗಳ ಆರಂಭಕ್ಕೆ ಆದೇಶವನ್ನು ನೀಡಿದೆ‌.

ಹೌದು ಆಗಸ್ಟ್ 23 ರಿಂದ ರಾಜ್ಯದಲ್ಲಿನ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರೌಢ ಶಾಲೆಗಳಲ್ಲಿ ಭೌತಿಕ ವರ್ಗಗಳನ್ನು ತೆರೆಯುವಂತೆ ಆದೇಶ ಮಾಡಿದೆ ಹೌದು ಆರಂಭದಲ್ಲಿ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆಗಳನ್ನು ಪೂರ್ಣ ಪ್ರಮಾಣದಲ್ಲಿ ಪ್ರಾರಂಭಿಸಿ ಬೋಧನಾ ತರಗತಿಗಳನ್ನು ನಡೆಸಲು ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಕ್ರಮಗಳನ್ನು ಬಿಡುಗಡೆ ಮಾಡಲಾಗಿದೆ.

ರಾಜ್ಯ ಸರ್ಕಾರದ ಸೂಚನೆಯಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಶಾಲೆಗಳ ಆರಂಭಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ‌‌. 2021 -22 ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭ ಕುರಿತಂತೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆ ಯಲ್ಲಿ ಆರೋಗ್ಯ ಇಲಾಖೆಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು ಹಾಗೂ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಚರ್ಚಿಸಿ ರಾಜ್ಯದಲ್ಲಿ ಶಾಲೆಗಳ ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡಲಾಗಿದೆ

ಒಪ್ಪಿಗೆಯ ಹಿನ್ನಲೆಯಲ್ಲಿ 23-08-2021 ರಿಂದ ರಾಜ್ಯದಲ್ಲಿ ಕೋವಿಡ್-19ರ ಸೋಂಕಿನ ಪ್ರಮಾಣ ಶೇ.2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ 9ನೇ ಮತ್ತು 10 ನೇ ತರಗತಿಗಳನ್ನು ಆರಂಭ ಮಾಡಿ ಪ್ರಾರಂಭ ದಲ್ಲಿ ಪ್ರತಿ ದಿನ ಅರ್ಧ ದಿನ ಬೆಳಗಿನ ಅವಧಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳನ್ನು ತೆರೆಯಲು ಹಾಗೂ 1 ರಿಂದ 8ನೇ ತರಗತಿಗಳನ್ನು ಪ್ರಾರಂಭಿಸುವ ಬಗ್ಗೆ ನಂತರ ನಿರ್ಧರಿಸಲಾಗುವುದು ಎಂದು ತಿರ್ಮಾನಿಸಲಾಗಿದೆ.

ಇನ್ನೂ ಪ್ರಮುಖವಾಗಿ ಕೋವಿಡ್-19 ರ ಸೋಂಕಿನ ಪ್ರಮಾಣ ಶೇ.2ಕ್ಕಿಂತ ಹೆಚ್ಚು ಇರುವ ಜಿಲ್ಲೆಗಳಲ್ಲಿ 1 ರಿಂದ 10 ನೇ ತರಗತಿಗಳಿಗೆ ಪರ್ಯಾಯ ವಿಧಾನ ದಲ್ಲಿ ಕಲಿಕೆ ಮತ್ತು ಬೋಧನಾ ಪ್ರಕ್ರಿಯೆಗಳನ್ನು ಮುಂದುವರೆಸಲು ತಿಳಿಸಿ ಆದೇಶವನ್ನು ಹೊರಡಿಸಲಾಗಿದೆ.

ಪ್ರಮುಖವಾಗಿ 23-08-2021 ರಿಂದ ಕೋವಿಡ್- 19ರ ಸೋಂಕಿನ ಪ್ರಮಾಣ 2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ 9 ಮತ್ತು 10ನೇ ತರಗತಿಗಳಿಗೆ ಸಂಬಂಧಿಸಿದಂತೆ ಈ ಕೆಳಗಿನಂತೆ ಮಾರ್ಗಸೂಚಿಯನ್ನು ಅನುಸರಿಸಿ ಕ್ರಮವನ್ನು ವಹಿಸಿಕೊಳ್ಳಲು ಹೇಳಲಾಗಿದೆ

ಮಾರ್ಗಸೂಚಿ ಕ್ರಮಗಳು

  • ಶೇ.2ಕ್ಕಿಂತ ಕಡಿಮೆ ಸೋಂಕಿನ ಪ್ರಮಾಣ ಇರುವ ಜಿಲ್ಲೆಗಳಲ್ಲಿ 9 ಮತ್ತು 10ನೇ ತರಗತಿಗಳನ್ನು ದಿನಾಂಕ 23-08-2021ರಿಂದ ಪ್ರತಿ ದಿನ ಅರ್ಧದಿನ ಬೆಳಗಿನ ಅವಧಿಯಲ್ಲಿ ಭೌತಿಕ ತರಗತಿಗಳನ್ನು ನಡೆಸುವುದು.
  • ಶಾಲೆ ಪ್ರಾರಂಭಿಸಲು ನಿಗದಿಪಡಿಸಿರುವ ಪ್ರಮಾಣಿತ ಕಾರ್ಯಾಚರಣೆ ವಿಧಾನದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದು.
  • ಮಕ್ಕಳು ಶಾಲೆಗೆ ಹಾಜರಾಗುವಾಗ ಪೋಷಕರ ಅನುಮತಿ ಪತ್ರ ತರುವುದು ಕಡ್ಡಾಯ. ಅನುಮತಿ ಪತ್ರದಲ್ಲಿ ಮಗುವಿಗೆ ಕೋವಿಡ್-19 ಸೋಂಕಿನ ಯಾವುದೇ ಲಕ್ಷಣಗಳಿರುವುದಿಲ್ಲ ಎಂದು ದೃಢೀಕರಿಸಬೇಕು.
  • 9 ಮತ್ತು 10ನೇ ತರಗತಿಗಳ ವಿದ್ಯಾರ್ಥಿಗಳು ಮನೆಯಿಂದಲೇ ಅಗತ್ಯವಾದ ಕುಡಿಯುವ ನೀರು,ಉಪಹಾರವನ್ನು ತರುವುದು
  • ಅವಶ್ಯಕತೆ ಅನುಸಾರ ಶಾಲೆಗಳಲ್ಲಿ ಮಕ್ಕಳಿಗೆ ಕುಡಿಯಲು ಶುದ್ಧ ಬಿಸಿನೀರಿನ ವ್ಯವಸ್ಥೆ ಮಾಡುವುದು.
  • ಶಾಲೆಗಳಲ್ಲಿ ವಿದ್ಯಾರ್ಥಿಗಳ ಭೌತಿಕ ಹಾಜರಾತಿ ಕಡ್ಡಾಯವಲ್ಲ. ಆನ್ ಲೈನ್ ಅಥವಾ ಪರ್ಯಾಯ ವಿಧಾನದಲ್ಲಿ ಹಾಜರಾಗಬಹುದು.
  • ಶಾಲೆಗೆ ಹಾಜರಾಗಲು ಬಯಸದೇ ಇರುವ ವಿದ್ಯಾರ್ಥಿಗಳಿಗೆ ಈಗ ಅನುಸರಿಸುತ್ತಿರುವ ಆನ್ ಲೈನ್, ಇತರೆ ಪರ್ಯಾಯ ವ್ಯವಸ್ಥೆಯನ್ನು ಮುಂದುವರೆಸಿಕೊಂಡು ಹೋಗಬೇಕು.

Google News

 

 

WhatsApp Group Join Now
Telegram Group Join Now
Suddi Sante Desk