ನವದೆಹಲಿ –
ಕೇರಳ, ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿ ಸೇರಿ ಐದು ರಾಜ್ಯಗಳ ವಿಧಾನ ಸಭಾ ಚುನಾವಣೆಗೆ ಕೇಂದ್ರ ಚುನಾವಣೆ ಆಯೋಗ ದಿನಾಂಕ ಪ್ರಕಟಿಸಿದೆ ಇಡೀ ದೇಶದ ಕೇಂದ್ರ ಬಿಂದುವಾಗಿರುವ ತಮಿಳುನಾಡು, ಕೇರಳ, ಪಶ್ಚಿಮಬಂಗಾಲ, ಅಸ್ಸಾಂ ವಿಧಾನಸಭಾ ಚುನಾವಣೆ ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೆರಿ ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದೆ.
ವಿಜ್ಞಾನ್ ಭವನದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಆರೋರಾ, ಅಸ್ಸಾಂನಲ್ಲಿ 3 ಹಂತದಲ್ಲಿ ಚುನಾವಣೆ ನಡೆಯಲಿದೆ. ಮಾರ್ಚ್ 27 ಕ್ಕೆ ಮೊದಲ ಹಂತದ ಚುನಾವಣೆ, ಏಪ್ರಿಲ್ 1 ರಂದು ಎರಡನೇ ಹಂತದ ಚುನಾವಣೆ, ಏಪ್ರಿಲ್ 6ಕ್ಕೆ ಮೂರನೇ ಹಂತದ ಚುನಾವಣೆ ಹಾಗೂ ಮೇ 2ಕ್ಕೆ ಮತಎಣಿಕೆ ನಡೆಯಲಿದೆ ಎಂದರು.
ಕೇರಳ:
ಕೇರಳ ರಾಜ್ಯದಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 6ರಂದು ಕೇರಳ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಮೇ 2ರಂದು ಫಲಿತಾಂಶ ಪ್ರಕಟವಾಗಲಿದೆ.
ತಮಿಳುನಾಡು:
ತಮಿಳುನಾಡು ರಾಜ್ಯದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್ 6ರಂದು ಚುನಾವಣೆ, ಮೇ 2ರಂದು ಮತಎಣಿಕೆ ನಡೆಯಲಿದೆ.
ಪುದುಚೇರಿ:
ಪುದುಚೇರಿಯಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 6 ರಂದು ಪುದುಚೇರಿ ಚುನಾವಣೆ ನಡೆಯಲಿದ್ದು, ಮೇ 2 ರಂದು ಫಲಿತಾಂಶ ಪ್ರಕಟವಾಗಲಿದೆ.
ಪಶ್ಚಿಮಬಂಗಾಳ 8 ಹಂತಗಳಲ್ಲಿ ಮತದಾನ
ಮಾರ್ಚ್ 27ರಂದು ಮೊದಲ ಹಂತದ ಚುನಾವಣೆ, ಏಪ್ರಿಲ್ 1ರಂದು ಎರಡನೇ ಹಂತದ ಚುನಾವಣೆ, ಏಪ್ರಿಲ್ 6ರಂದು 3ನೇ ಹಂತದ ಚುನಾವಣೆ, ಏಪ್ರಿಲ್ 10ರಂದು 4ನೇ ಹಂತದ ಚುನಾವಣೆ, ಏಪ್ರಿಲ್ 17ರಂದು 5ನೇ ಹಂತದ ಮತದಾನ, ಏಪ್ರಿಲ್ 22ರಂದು 6ನೇ ಹಂತದ ಮತದಾನ, ಏಪ್ರಿಲ್ 26ರಂದು 7ನೇ ಹಂತದ ಮತದಾನ, ಏಪ್ರಿಲ್ 29ರಂದು 8ನೇ ಹಂತದ ಮತದಾನ, ಮೇ 2ರಂದು ಫಲಿತಾಂಶ ಪ್ರಕಟ.
ಕೋವಿಡ್ 19 ಸೋಂಕು ನಂತರ ಬಿಹಾರ ಚುನಾವಣೆ ನಡೆದಿದ್ದು, ಆ ಬಳಿಕ ನಡೆಯುತ್ತಿರುವ ಮೊದಲ ಪ್ರಮುಖ ಚುನಾವಣೆ ಇದಾಗಿದ್ದು, ಈ ಚುನಾವಣೆ ಕೂಡಾ ಕೋವಿಡ್ ಮಾರ್ಗದರ್ಶಿಯಂತೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಆಯೋಗ ಹೇಳಿದೆ.
ಪಶ್ಚಿಮಬಂಗಾಳದ 294 ಕ್ಷೇತ್ರಕ್ಕೆ, ತಮಿಳುನಾಡಿನ 234 ಸ್ಥಾನಕ್ಕೆ, ಕೇರಳದ 140 ಕ್ಷೇತ್ರಕ್ಕೆ, ಅಸ್ಸಾಂನ 126 ಹಾಗೂ ಕೇಂದ್ರಾಡಳಿತ ಪ್ರದೇಶವಾದ ಪುದುಚೆರಿಯ 30 ಸ್ಥಾನಗಳಿಗೆ ಚುನಾವಣೆ ನಡೆಸಲು ಮುಹೂರ್ತ ನಿಗದಿಯಾದಂತಾಗಿದೆ.