ಬೆಂಗಳೂರು – ಶಿವಮೊಗ್ಗ –
ಸೆಕ್ಸ್ ಸಿಡಿ ಯಲ್ಲಿ ಕಾಣಿಸಿಕೊಂಡ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ.

ಬೆಂಗಳೂರು ಮತ್ತು ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಗಿದೆ. ಕೆಲಸದ ಆಮಿಷವೊಡ್ಡಿ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡ ಹಿನ್ನೆಲೆಯಲ್ಲಿ ಸಚಿವ ರಮೇಶ್ ಜಾರಕಿಹೊಳಿ ಅವರ ರಾಜೀನಾಮೆ ಪಡೆಯಬೇಕು. ಇಲ್ಲದಿದ್ದರೆ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿ ಶಿವಮೊಗ್ಗ, ಬೆಂಗಳೂರಿನಲ್ಲಿ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಸಲಾಗಿದೆ.

ಶಿವಮೊಗ್ಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ. ಗಿರೀಶ್, ಕೆ. ರಂಗನಾಥ್, ಪ್ರವೀಣ್, ಕಿರಣ್ ಮೊದಲಾದವರು ಭಾಗವಹಿಸಿದ್ದರು ಇತ್ತ ಯುವ ಘಟಕ ದಿಂದಲೂ ಪ್ರತಿಭಟನೆ ಮಾಡಿದರು.