ACB ಬಲೆಗೆ ಬಿದ್ದ ಗ್ರಾಮ ಪಂಚಾಯತಿ ಸಿಬ್ಬಂದಿ – ವಾರಸು ದಾಖಲಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಸಿದಗೌಡ…..

Suddi Sante Desk

ಬೆಳಗಾವಿ –

ವಾರಸು ನಲ್ಲಿ ಹೆಸರು ದಾಖಲಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗ್ರಾಮ ಪಂಚಾಯತಿ ಕ್ಲರ್ಕ್ ರೊಬ್ಬರು ಎಸಿಬಿ ಬಲೆಗೆ ಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಗುಡಸ ಗ್ರಾಮದಲ್ಲಿ ನಡೆದಿದೆ.ಹೌದು ಗ್ರಾಮ ಪಂಚಾಯತ್ ನ ಕ್ಲರ್ಕ್ ಒಬ್ಬರು ಲಂಚ‌ ಪಡೆಯುವಾಗ ಭ್ರಷ್ಟಾಚಾರ ನಿರ್ಮೂಲನಾ ದಳದ ಬಲೆಗೆ ಬಿದ್ದಿದ್ದಾರೆ.

ಪಂಚಾಯತಿ ಕ್ಲರ್ಕ್ ಹಾಗೂ ಬಿಲ್ ಕಲೆಕ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಸಿದಗೌಡ ಬಸವಣ್ಣಿ ನೇರ್ಲಿ ಅವರು 7,400 ರೂಪಾಯಿ ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.ಇವರು ಆಸ್ತಿ ರಿಜಿಸ್ಟರ್ ನಲ್ಲಿ ಅರ್ಜಿದಾರರೊಬ್ಬರ ವಾರಸಾ ಹೆಸರು ದಾಖಲಿಸಲು ರೂ.7,400 ಲಂಚಕ್ಕೆ ಬೇಡಿಕೆ ಇಟ್ಟಿದ್ದರು.ಈ ಕುರಿತಂತೆ ಅರ್ಜಿದಾರ ಭೀಮಪ್ಪ ಕಲಕುಟಗಿ ಎಸಿಬಿಗೆ ದೂರು ಸಲ್ಲಿಸಿದ್ದರು. ಆರೋಪಿ ಯನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಎಸಿಬಿ ಎಸ್ಪಿ ಬಿ.ಎಸ್.ನ್ಯಾಮಗೌಡರ ಮಾರ್ಗದರ್ಶ ನದಲ್ಲಿ ಡಿವೈಎಸ್ಪಿ ಕರುಣಾಕರ ಶೆಟ್ಟಿ ನೇತೃತ್ವದಲ್ಲಿ ಇನ್ಸ್ಪೆಕ್ಟರ್ ಗಳಾದ ಅಡಿವೇಶ ಗುದಿಗೊಪ್ಪ ಹಾಗೂ ಸುನಿಲಕುಮಾರ ಮತ್ತು ಸಿಬ್ಬಂದಿ ದಾಳಿ‌ ನಡೆಸಿದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.