ವಾರದಲ್ಲಿ ಐದು ದಿನ‌ ಶಾಲೆಗಳನ್ನು ನಡೆಸಲು ಸೂಚನೆ – ಪೂರ್ಣ ಪ್ರಮಾಣದಲ್ಲಿ ಹಾಜರಾತಿಗೆ ಅವಕಾಶ…..

Suddi Sante Desk

ಬೆಂಗಳೂರು –

ಕೋವಿಡ್ ಹಾಗೂ ಮೂರನೇಯ ಅಲೆಯನ್ನು ಗಮನದಲ್ಲಿಟ್ಟುಕೊಂಡು ವಾರದಲ್ಲಿ ಐದು ದಿನ ಶಾಲೆ ಗೆ ಅವಕಾಶವನ್ನು ನೀಡಲಾಗಿದೆ. ಹೌದು ಕೋವಿಡ್ ಹೊಸ ಮಾರ್ಗಸೂಚಿ ಹಿನ್ನೆಲೆಯಲ್ಲಿ ವಾರದ ಐದು ದಿನ 6 ರಿಂದ 12ನೇ ತರಗತಿವರೆಗೆ ಶಾಲೆ,ಕಾಲೇಜುಗಳಲ್ಲಿ ಶೇ.100 ರಷ್ಟು ಹಾಜರಾತಿಗೆ ರಾಜ್ಯ ಸರ್ಕಾರ ಅನುಮತಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು

ಶನಿವಾರ ಮತ್ತು ಭಾನುವಾರದಂದು ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗುತ್ತದೆ.ಕೋವಿಡ್ 19 ತಜ್ಞರ ಸಲಹೆ,ಸೂಚನೆಯಂತೆ ಕೋವಿಡ್-19 ಪಾಸಿಟಿವಿಟಿ ಪ್ರಮಾಣ ಶೇ.1ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಶೇ.100 ರಷ್ಟು ಹಾಜರಾತಿಯೊಂದಿಗೆ ಶಾಲಾ, ಕಾಲೇಜುಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯ ನಿರ್ವಹಿಸಲಿವೆ.

ವಿದ್ಯಾರ್ಥಿಗಳು,ಶಿಕ್ಷಕರು,ಬೋಧಕೇತರ ಸಿಬ್ಬಂದಿ ಹಾಗೂ ಶಾಲಾ,ಕಾಲೇಜುಗಳ ಆಡಳಿತ ಮಂಡಳಿಗಳ ಸಹಕಾರ,ಕೋವಿಡ್-19 ಸುರಕ್ಷತಾ ನಿಯಮಗಳ ಪಾಲನೆ,ಯಶಸ್ವಿ ಕೋವಿಡ್-19 ಲಸಿಕೆ ಅಭಿಯಾನ ದಿಂದ ಕೋವಿಡ್-19 ಮೂರನೇ ಅಲೆಯ ಭೀತಿ ಕಡಿಮೆ ಆಗಿದೆ.ಈ ಹಿನ್ನೆಲೆಯಲ್ಲಿ 6 ರಿಂದ 12ನೇ ವರ್ಗದವರೆಗಿನ ತರಗತಿಗಳನ್ನು ಪೂರ್ಣ ಪ್ರಮಾಣ ದಲ್ಲಿ ಆರಂಭಿಸಲು ಅನುಮತಿ ನೀಡಲಾಗಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.