ಹಾನಗಲ್ ನಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ – ಉಪ ಚುನಾವಣೆಯ ಅಖಾಡಕ್ಕೆ ವಿನಯ ಕುಲಕರ್ಣಿ – ಪಕ್ಷದ ಅಭ್ಯರ್ಥಿ ಪರ ಮತಯಾಚನೆ…..

Suddi Sante Desk

ಹಾನಗಲ್ –

ಹಾನಗಲ್ಲ ಉಪ ಚುನಾವಣೆಯ ಅಖಾಡಕ್ಕೆ ಮಾಜಿ ಸಚಿವ ವಿನಯ ಕುಲಕರ್ಣಿ ಎಂಟ್ರಿ ಕೊಟ್ಟಿದ್ದಾರೆ. ಹೌದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೀನಿವಾಸ ಮಾನೆ ಪರವಾಗಿ ಕ್ಷೇತ್ರದಲ್ಲಿ ಪ್ರಚಾರ ಮಾಡಿದರು.

ಪ್ರಚಾರಕ್ಕಾಗಿ ಕ್ಷೇತ್ರಕ್ಕೆ ಆಗಮಿಸಿದ ವಿನಯ ಕುಲಕರ್ಣಿ ಇವರನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು.ಪಕ್ಷದ ಕಾರ್ಯಕರ್ತರು ಮುಖಂಡರು ಅದ್ದೂರಿಯಾಗಿ ಸ್ವಾಗತಿಸಿ ಕ್ಷೇತ್ರಕ್ಕೆ ಬರಮಾಡಿಕೊಂಡರು

ಕ್ಷೇತ್ರಕ್ಕೆ ಬರತ್ತಿದ್ದಂತೆ ಮಾರಂಬಿಡ ಜಿಲ್ಲಾ ಪಂಚಾಯತ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೀನಿವಾಸ ಮಾನೆ ಪರವಾಗಿ ಕ್ಷೇತ್ರದಲ್ಲಿ ಸುತ್ತಾಡಿ ಮತಯಾಚನೆ ಮಾಡಿದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ,ಮಾಜಿ ಸಚಿವರಾದ ಆರ್ ವಿ ದೇಶಪಾಂಡೆ ಮತ್ತು ಪಕ್ಷದ ಹಿರಿಯರು,ಕಾರ್ಯಕ ರ್ತರು ಸೇರಿದಂತೆ ಹಲವರು ಉಪಸ್ಥಿತರಿದ್ದರು

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.