ಬೆಂಗಳೂರು –
ಕಳೆದು ಒಂದು ವಾರದಿಂದ ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸೆಕ್ಸ್ ಸಿಡಿ ವಿಚಾರದಲ್ಲಿ ಕೊನೆಗೂ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ ಹೌದು ರಾಜಕಾರಣದಲ್ಲಿ ಭಾರೀ ಸುದ್ದು ಮಾಡುತ್ತಿ ರುವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿ.ಡಿ. ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ವಿಶೇಷ ಕಾರ್ಯಪಡೆಗೆ (ಎಸ್ಐಟಿ) ವಹಿಸಿದೆ.

ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೇಂದು ಮುಖರ್ಜಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸ ಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮುಖ್ಯಮಂತ್ರಿ ಮತ್ತು ಹಿರಿಯ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿ ಆದೇಶ ಹೊರಡಿಸಲಾಗಿದೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.

ರಮೇಶ್ ಜಾರಕಿಹೊಳಿ ಸೆಕ್ಸ್ ಸಿ.ಡಿ ಎಲ್ಲಿ ತಯಾರಾ ಗಿದೆ, ವೆಬ್ ಸೈಟ್ ಗಳಿಗೆ ಎಲ್ಲಿಂದ ಅಪ್ಲೋಡ್ ಆಯಿತು ಎಂಬ ಬಗ್ಗೆ ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಸಚಿವರು ತಿಳಿಸಿದರು.

ಇನ್ನೂ ಈ ಹಿಂದೆ ಸಿಡಿ ಪ್ರಕರಣದಲ್ಲಿ ಸಿಡಿ ಬಿಡುಗಡೆ ಮಾಡಿ ಬಳಿಕ ರಮೇಶ್ ಜಾರಕಿಹೊಳಿ ವಿರುದ್ಧ ದೂರು ಕೊಟ್ಟಿದ್ದ ಸಾಮಾಜಿಕ ಹೋರಾಟಗಾರ ದಿನೇಶ್ ದೂರನ್ನು ಹಿಂದಕ್ಕೆ ಪಡೆದುಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.ಒಟ್ಟಾರೆ ಇವೆಲ್ಲದರ ನಡುವೆ ಈಗ ರಾಜ್ಯ ಸರ್ಕಾರ ವಿಶೇಷ ತನಿಖೆಗೆ ಆದೇಶ ಮಾಡಿದ್ದು ಈವರೆಗೆ ಸೆಕ್ಸ್ ಸಿಡಿ ವಿಚಾರದಲ್ಲಿ ಯುವತಿಯ ಕುರಿತು ಸರಿಯಾದ ಮಾಹಿತಿ ಸಿಗದೆ ಸ್ಪಷ್ಟತೆ ಕೂಡಾ ಸಿಗುತ್ತಿಲ್ಲ ಇವೆಲ್ಲದರ ನಡುವೆ ಯಾವ ಆಂಗಲ್ ನಲ್ಲಿ ತನಿಖೆ ಮಾಡುತ್ತಾರೆ ಎಂಬುದು ಯಕ್ಷ ಪ್ರಶ್ನೆಯಾಗಿದೆ