ಬೆಳಗಾವಿ –
ಕೇಂದ್ರದ ಸಚಿವರಾಗಿದ್ದ ದಿವಂಗತ ಸುರೇಶ ಅಂಗಡಿ ಅವರ ತಾಯಿ ಸೋಮವ್ವ ಅಂಗಡಿ ಇಂದು ಬೆಳಗ್ಗೆ 9.20ಕ್ಕೆ ನಿಧನರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು.

ಬೆಳಗಾವಿ ತಾಲೂಕಿನ ಕೆಕೆ ಕೊಪ್ಪ ಗ್ರಾಮದ ನಾಗೇರಹಾಳ ಗ್ರಾಮದವರಾದ ಸೋಮವ್ವ ಕಳೆದ ಕೆಲವು ದಿನಗಳಿಂದ ವಯೋಸಹಜ ಅನಾರೋಗ್ಯ ದಿಂದ ಬಳಲುತ್ತಿದ್ದರು. ಅವರಿಗೆ ಐವರು ಗಂಡು ಮಕ್ಕಳು ಹಾಗೂ ಓರ್ವ ಹೆಣ್ಣು ಮಗಳು. ಸುರೇಶ ಅಂಗಡಿ ಅವರ ಮೇಲೆ ಅತ್ಯಂತ ಪ್ರೀತಿ ಹೊಂದಿದ್ದ ಸೋಮವ್ವ, ಸುರೇಶ ಅಂಗಡಿ ಅಕಾಲಿಕ ನಿಧನ ದಿಂದ ಮಾನಸಿಕವಾಗಿ ಕುಗ್ಗಿಹೋಗಿದ್ದರು.

ಸೋಮವ್ವ ಅಂಗಡಿ ನಿಧನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಸೇರಿದಂತೆ ಹಲವು ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
