ಬಳ್ಳಾರಿ –
ವಿಷ ಸೇವನೆ ಮಾಡಿ ಪೊಲೀಸ್ ಕಾನ್‌ಸ್ಟೇಬಲ್ ವೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಸಂಡೂರು ತಾಲೂಕಿನ ಚಿಕ್ಕ ಅಂತಾಪುರ ಗ್ರಾಮದಲ್ಲಿ ನಡೆದಿದೆ. ಬಸವನಗೌಡ(35) ಎಂಬುವರೇ ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಕಾನ್ಸ್‌ಟೇಬಲ್ ಆಗಿದ್ದಾರೆ.
ಮೂಲತಃ ಸಂಡೂರು ತಾಲೂಕಿನ ಚಿಕ್ಕ ಅಂತಾಪುರ ಗ್ರಾಮದ ನಿವಾಸಿಯಾದ ಬಸವನಗೌಡ ಅವರು ನಿನ್ನೆ ಊರಿಗೆ ತೆರಳಿದ್ದರು. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಬಸವನಗೌಡ ಆತ್ಮಹತ್ಯೆಯನ್ನು ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ನಿನ್ನೆ ರಾತ್ರಿ ಮನೆಯಲ್ಲಿ ಮಲಗಿದ್ದ ವೇಳೆ ಬಸವನಗೌಡ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.ಮೃತ ಬಸವನಗೌಡ ಬಳ್ಳಾರಿಯ ಗಾಂಧಿ ನಗರ ಪೊಲೀಸ್ ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.