ರಾಜ್ಯದ ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್ ತಿಂಗಳಾಂತ್ಯಕ್ಕೆ ಜಾರಿಗೆ…..

Suddi Sante Desk

ಬೆಂಗಳೂರು –

ರಾಜ್ಯ ಸರ್ಕಾರ ರಾಜ್ಯದ ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಿದೆ.ಹೌದು ನೌಕರರಿಗೆ ಮತ್ತು ಅವರ ಅವಲಂಬಿತರಿಗೆ ನಗದು ರಹಿತ ಚಿಕಿತ್ಸೆ ನೀಡುವ ಯೋಜನೆ ಆರಂಭ ಮಾಡಿದ್ದು ಇದು ಈ ತಿಂಗಳ ಅಂತ್ಯಕ್ಕೆ ಜಾರಿಗೆ ಬರಲಿದೆ.ಹೌದು ಇದೇ ಮೊದಲ ಬಾರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಆರೋಗ್ಯ ಯೋಜನೆ ಹೆಸರಲ್ಲಿ ನಗದು ರಹಿತ ಆರೋಗ್ಯ ಸೇವೆಯನ್ನು ನೀಡಲಾಗುತ್ತಿದೆ.

ಇನ್ನೂ ಈ ಒಂದು ಯೋಜನೆ ಜಾರಿಗೆ ಆರ್ಥಿಕ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.ಯೋಜನೆಯಿಂದ 25 ಲಕ್ಷ ಜನರಿಗೆ ಅನುಕೂಲವಾಗಲಿದೆ.ಇದುವರೆಗೆ ನೌಕರರು ಹಣ ಪಾವತಿಸಿ ಆರೋಗ್ಯ ಸೇವೆ ಪಡೆದ ನಂತರ ಮರುಪಾವತಿ ಪಡೆಯಬೇಕಿತ್ತು.ಈಗ ಇನ್ನೂ ಮುಂದ ನಗದು ರಹಿತವಾಗಿ ಆರೋಗ್ಯ ಸೇವೆ ಒದಗಿಸಲಾಗುತ್ತದೆ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತರು ಚಿಕಿತ್ಸೆ ಗಾಗಿ ಹಣ ಹೊಂದಿಸದೆ ನಗದು ರಹಿತವಾಗಿ ಆರೋಗ್ಯ ಸೇವೆ ಪಡೆಯಬಹುದಾಗಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.