ಬೆಂಗಳೂರು –
ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ವಿಶೇಷ ತನಿಖಾ ದಳದ ಅಧಿಕಾರಿಗಳು ಶಂಕಿತ ಪತ್ರಕರ್ತರು ಹಾಗೂ ಅವರ ಕುಟುಂಬಸ್ಥರ ಬ್ಯಾಂಕ್ ಖಾತೆಯಲ್ಲಿ ಲಕ್ಷಾಂತರ ಹಣ ಇರುವುದನ್ನು ಪತ್ತೆ ಹಚ್ಚಿದ್ದಾರೆ.
ಬೆಂಗಳೂರು ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ಶಂಕಿತ ಪತ್ರಕರ್ತರ 8 ಬ್ಯಾಂಕ್ ಖಾತೆಯನ್ನು ಪರಿಶೀಲಿಸಿರುವ ಅಧಿಕಾರಿಗಳು ಒಂದು ತಿಂಗಳ ಒಳಗೆ ಲಕ್ಷಾಂತರ ಹಣ ಜಮೆಯಾಗಿರುವುದನ್ನು ಪತ್ತೆ ಹಚ್ಚಿದ್ದಾರೆ.
ಈ ನಡುವೆ ಸಿಡಿಯಲ್ಲಿ ಪತ್ತೆಯಾಗಿರುವ ಮಹಿಳೆಯ ಅಪಹರಣವಾಗಿದೆ ಎಂದು ಆಕೆಯ ತಂದೆ ನೀಡಿದ ದೂರನ್ನು ಅಧಿಕಾರಿಗಳು ಆರ್’ಟಿ ನಗರ ಪೊಲೀಸ್ ಠಾಣೆಗೆ ವರ್ಗಾಯಿಸಿದ್ದು, ಆರ್’ಟಿ ನಗರ ಪೊಲೀಸರು ಈ ಸಂಬಂಧ ಎಫ್‌ಐಆರ್ ದಾಖಲಿಸಿ ಕೊಂಡಿದ್ದಾರೆ
ಬಸವೇಶ್ವರನಗರದಲ್ಲಿರುವ ಮತ್ತೊಬ್ಬ ಶಂಕಿತ ವ್ಯಕ್ತಿಯ ಮನೆಯಲ್ಲೂ ಎಸ್‌ಐಟಿ ಪರಿಶೀಲನೆ ನಡೆಸಿದ್ದು, ಈ ವೇಳೆ ರೂ.18 ಲಕ್ಷ ಮೌಲ್ಯ ಚಿನ್ನ ಖರೀದಿಸಿರುವ ರಶೀದಿ, ಲ್ಯಾಪ್ ಟಾಪ್ ಪೆನ್ ಡ್ರೈವ್ ವಶಕ್ಕೆ ಪಡೆದುಕೊಂದಿದ್ದಾರೆ. ಇದೀಗ ವಶಕ್ಕೆ ಪಡೆದಿರುವ ಲ್ಯಾಪ್ ಟಾಪ್ ಹಾಗೂ ಪೆನ್ ಡ್ರೈವ್ ನ್ನು ಅಧಿಕಾರಿಗಳು ವಿಧಿವಿಜ್ಞಾನ ಪ್ರಯೋಗಾಲ ಯಕ್ಕೆ ಪರಿಶೀಲನೆಗೆ ಕಳುಹಿಸಿದ್ದಾರೆ.