ಧಾರವಾಡ –
ಕೊರೋನಾ 2ನೇ ಅಲೆಯ ಅಬ್ಬರ ರಾಜ್ಯದಲ್ಲಿ ಶುರುವಾಗಿದೆ. ಇದೇ ಸಂದರ್ಭದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಮತ್ತೆ ಲಾಕ್ ಡೌನ್ ಅಗುತ್ತದೆನಾ ಇಲ್ಲ ರಾಜ್ಯದ ಜನರು ಇನ್ನೂ ಕೂಡಾ ಸಾಕಷ್ಟು ಪ್ರಮಾಣದಲ್ಲಿ ಗೊಂದಲದಲ್ಲಿ ಇದ್ದಾರೆ.ಇವೆಲ್ಲದರ ನಡುವೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಇವೆಲ್ಲ ಗೊಂದಲದ ಪ್ರಶ್ನೆಗಳಿಗೆ ಸ್ಪಷ್ಟತೆ ನೀಡಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದರು.
ಈ ಕುರಿತಂತೆ ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ಅವರು, ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಬಗ್ಗೆ ಯಾವುದೇ ಚರ್ಚೆ ಇದುವರೆಗೆ ನಡೆಸಿಲ್ಲ. ಇದರ ಬದಲಾಗಿ ಕೊರೋನಾ ನಿಯಂತ್ರಣಕ್ಕಾಗಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವ ಕುರಿತಂತೆ ಚರ್ಚಿಸಲಾಗಿದೆ ಎಂದರು.
ಜೊತೆಗೆ ಶಾಲಾ-ಕಾಲೇಜು ಬಂದ್ ಬಗ್ಗೆಯೂ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.
ರಾಹೊರ ರಾಜ್ಯಗಳಲ್ಲಿ ಕೋವಿಡ್ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳನ್ನು ಕಟ್ಟು ನಿಟ್ಟಾಗಿ ಅನುಸರಿಸಲಾಗುತ್ತಿದೆ. ಶಾಲಾ ಕಾಲೇಜುಗಳ ವಿಚಾರದಲ್ಲಿ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳುತ್ತವೆ. ರಾಜ್ಯದಲ್ಲಿ ಲಾಕ್ ಡೌನ್ ಮಾಡುವ ಬಗ್ಗೆ ಇದುವರೆಗೆ ಚರ್ಚೆ ಆಗಿಲ್ಲ. ಬದಲಿಗೆ ಕೋವಿಡ್ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಬೊಮ್ಮಾಯಿ ತಿಳಿಸಿದರು