ಬೆಂಗಳೂರು –
ರಾಜ್ಯದಲ್ಲಿ ನಿಗದಿಯಂತೆ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಯಲಿವೆ ಯಾವುದೇ ಕಾರಣಕ್ಕೂ ಅವುಗಳನ್ನು ಮುಂದೂಡುವ ಪ್ರಶ್ನೆಯೇ ಇಲ್ಲ. ನಿಗದಿಯಂತೆಯೇ ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯತಿ ಚುನಾವಣೆ ನಡೆಯಲಿದೆ ಎಂದು ಗ್ರಾಮೀಣಾಭಿ ವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಶಾಸಕ ಸುನಿಲ್ ಕುಮಾರ್ ಈ ಕುರಿತಾಗಿ ಪ್ರಶ್ನಿಸಿದಾಗ ಮಾಹಿತಿ ನೀಡಿದ ಸಚಿವರು, ನಿಗದಿಯಂತೆಯೇ ತಾಪಂ, ಜಿಪಂ ಚುನಾವಣೆ ನಡೆಯಲಿದ್ದು ಅಧಿಕಾರ ಅವಧಿ ಮುಗಿಯುತ್ತಿದ್ದಂತೆ ಚುನಾವಣೆ ನಡೆಸಲಾಗುವುದು.ಜಿಲ್ಲಾಧಿಕಾರಿಗಳು ಕ್ಷೇತ್ರ ಮರುವಿಂಗಡಣೆ, ಮೀಸಲಾತಿ ಸೇರಿದಂತೆ ಅಗತ್ಯ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಿದ್ದಾರೆ.

ಯಾವುದೇ ಕಾರಣಕ್ಕೂ ಚುನಾವಣೆ ಮುಂದೂಡಿಕೆ ಮಾಡುವುದಿಲ್ಲ. ಚುನಾವಣಾ ಆಯೋಗ ಯಾವುದೇ ಕ್ಷಣ ಚುನಾವಣೆಯನ್ನು ಘೋಷಣೆ ಮಾಡಿದರೂ ಚುನಾವಣೆ ನಡೆಯಲಿದೆ.ಕ್ಷೇತ್ರಗಳ ಮಾರ್ಗಸೂಚಿಯಲ್ಲಿ ಮಾತ್ರ ಗೊಂದಲ ಇರುವುದ ರಿಂದ ಮಾರ್ಗಸೂಚಿಯಲ್ಲಿನ ಲೋಪದೋಷ ಸರಿಪಡಿಸಿ ಚುನಾವಣೆ ನಡೆಸಬೇಕೆಂಬುದು ನಮ್ಮ ಮನವಿಯಾಗಿದೆ ಎಂದರು
