ಚಿಕ್ಕಬಳ್ಳಾಪುರ –
ಜಮೀನು ವಿವಾದದ ಹಿನ್ನಲೆಯಲ್ಲಿ ಗ್ರಾಮ ಪಂಚಾ ಯತಿ ಕಾರ್ಯದರ್ಶಿಯನ್ನೇ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ರಾಮಾಂಜಿ ಕೊಲೆಯಾದ ವ್ಯಕ್ತಿಯಾಗಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಅವುಲನಾಗೇನಹಳ್ಳಿ ಗ್ರಾಮದ ಬಳಿ ಈ ಒಂದು ಕೊಲೆ ನಡೆದಿದೆ.
ಮಚ್ಚಿನಿಂದ ಕೊಚ್ಚಿ ಕೊಲೆಯನ್ನು ಮಾಡಲಾಗಿದೆ. ಇನ್ನೂ ರಾಮಾಂಜಿ ಪತ್ನಿಗೆ ಗಂಭೀರ ಗಾಯವಾಗಿದೆ. ಬಂಡಿಕೊಡಗೇನಹಳ್ಳಿ ಗ್ರಾಮ ಪಂಚಾಯತಿ ಕಾರ್ಯದರ್ಶಿಯಾಗಿದ್ದಾರೆ. ಬೆಂಗಳೂರು ನಗರ ಜಿಲ್ಲೆಯ ಬಂಡಿಕೊಡಗೇನಹಳ್ಳಿ ಗ್ರಾಮ ಪಂಚಾಯತಿ ಆಗಿದೆ.
ಗಾಯಾಳು ಮಂಜುಳಮ್ಮ ಗಂಭೀರವಾಗಿ ಗಾಯ ಗೊಂಡಿದ್ದಾರೆ.ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆ ಯಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಗುಡಿಬಂಡೆ ಪೊಲೀಸ್ ಠಾಣೆ ವ್ಯಾಪ್ತಿ ಪ್ರಕರಣ ನಡೆದಿದೆ