ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರೊಬ್ಬನು ಇಪ್ಪತ್ತಕ್ಕೂ ಹೆಚ್ಚು ಅಡಿ ದೂರ ಹಾರಿ ಬಿದ್ದು ಸಾವಿಗೀಡಾದ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ.

ಬಸಪ್ಪ (55) ಮೃತಪಟ್ಟ ಬೈಕ್ ಸವಾರನಾಗಿದ್ದಾರೆ.ಕಾರು ಹೊಡೆದ ರಭಸಕ್ಕೆ ಬೈಕ್ ಸವಾರ ದೂರ ಹಸರಿ ಬಿದ್ದು ಕಬ್ಬಿಣದ ಸಲಾಕೆಯ ಡಿವೇಡರ್ ಗೆ ಸಿಲುಕಿದ್ದಾನೆ

ಹೊಸಪೇಟೆ ತಾಲೂಕಿನ ಪೋತಲಕಟ್ಟಿ ಗ್ರಾಮದ ರಾಹೆ 50 ಬಳಿ ಈ ಒಂದು ಘಟನೆ ನಡೆದಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಪೋತಲಕಟ್ಟಿ ಗ್ರಾಮದಲ್ಲಿ ನಡೆದಿದೆ.

ಮರಿಯಮ್ಮನ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

