ಗದಗ –
ನಮ್ಮ ಕರ್ನಾಟಕದ ಹೃದಯ ಭಾಗವಾಗಿರುವ ಬೆಳಗಾವಿ, ಕಾರವಾರ,ನಿಪ್ಪಾಣಿ ಮಹಾರಾಷ್ಟ್ರಕ್ಕೆ ಸೇರಿದ್ದು ಎಂದಿರುವ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜೀತ ಪವಾರ ಹೇಳಿಕೆಗೆ ಖಂಡನೆ ವ್ಯಕ್ತವಾಗಿದೆ.ಅಜೀತ್ ಪವಾರ ಪರಸ್ಪರ ಭಾಷಾ ವೈಷಮ್ಯ ಬಿತ್ತುವುದರ ಜೊತೆಗೆ ಕನ್ನಡಿಗರ ಸ್ವಾಭಿಮಾನ ಕೆಣಕುತ್ತಿದ್ದಾರೆ. ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ .ಸೂರ್ಯ ಚಂದ್ರ ಇರುವವರೆಗೂ ಕರ್ನಾಟಕದಿಂದ ಬೆಳಗಾವಿಯನ್ನು ಬೇರ್ಪಡಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಗದಗ ಜಿಲ್ಲಾ ಕನ್ನಡ ಕ್ರಾಂತಿ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ ಮುಧೋಳ ಹೇಳಿದ್ದಾರೆ.
ಪತ್ರಿಕಾ ಪ್ರಕಟಣೆಯ ಮೂಲಕ ಅಜೀತ್ ಪವಾರ್ ಹೇಳಿಕೆಯನ್ನು ಖಂಡಿಸಿದ್ದಾರೆ.ಅಜೀತ್ ಪವಾರ್ ಅವರು ಒಂದು ಜವಾಬ್ದಾರಿಯುತ ಸ್ಥಾನದಲ್ಲಿ ಕೂತು ದೇಶದ ಒಕ್ಕೂಟದ ವ್ಯವಸ್ಥೆಗೆ ದಕ್ಕೆ ತರುತ್ತಿದ್ದಾರೆ ಇದು ಖಂಡನಿಯ ಎಂದಿದ್ದಾರೆ. ಕೂಡಲೇ ತಮ್ಮ ಹೇಳಿಕೆಯನ್ನು ಹಿಂದೆ ಪಡೆದುಕೊಳ್ಳಬೇಕು ಇಲ್ಲವಾದ್ರೆ ಹೋರಾಟ ಮಾಡುವ ಎಚ್ಚರಿಕೆ ನೀಡಿದರು.