ಬೆಳಗಾವಿ –
ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಅಖಾಡಕ್ಕೆ ದಿವಂಗತ ಸುರೇಶ್ ಅಂಗಡಿ ಅವರ ಪತ್ನಿ ಮಂಗಲಾ ಅಂಗಡಿ ಅವರಿಗೆ ಬಿಜೆಪಿ ಟಿಕೆಟ್ ಪೈನಲ್ ಆಗಿದೆ.ಅಂಗಡಿ ಕುಟುಂಬಕ್ಕೆ ಅದೃಷ್ಠ ಒಲಿದು ಬಂದಿದ್ದು,ಸುರೇಶ್ ಅಂಗಡಿ ಅವರ ಪತ್ನಿ ಮಂಗಳಾ ಅಂಗಡಿ ಅವರಿಗೆ ಬಿಜೆಪಿ ಟಿಕೆಟ್ ಪೈನಲ್ ಆಗಿದೆ.

ಬಿಜೆಪಿ ಹೈಕಮಾಂಡ್ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯನ್ನಾಗಿ ಮಂಗಳಾ ಅಂಗಡಿ ಅವರ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಿದೆ.

ಕಳೆದ ಹಲವು ದಿನಗಳಿಂದ ಈ ಒಂದು ಉಪ ಚುನಾವಣೆ ಯಲ್ಲಿ ಟಿಕೆಟ್ ಯಾರಿಗೆ ಸಿಗಲಿದೆ ಎಂಬ ಕುರಿತು ಸಾಕಷ್ಟು ಪ್ರಮಾಣದಲ್ಲಿ ಚರ್ಚೆ ಗಳು ನಡೆದಿದ್ದವು. ಕೊನೆಗೂ ಸುರೇಶ್ ಅಂಗಡಿ ಕುಟುಂಬಕ್ಕೆ ಅದೃಷ್ಠ ಒಲಿದು ಬಂದಿದ್ದು ಸುರೇಶ್ ಅಂಗಡಿ ಅವರ ಪತ್ನಿ ಮಂಗಳಾ ಅಂಗಡಿ ಅವರಿಗೆ ಬಿಜೆಪಿ ಟಿಕೆಟ್ ಸಿಕ್ಕಿದೆ.

ಬಿಜೆಪಿ ಹೈಕಮಾಂಡ್ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯನ್ನಾಗಿ ಮಂಗಳಾ ಅಂಗಡಿ ಅವರ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಿದ್ದು ಇನ್ನೂ ಬಿಜೆಪಿ ಯಿಂದ ಇವರಾದರೆ ಅತ್ತ ಕೈ ಪಕ್ಷದಿಂದ ಸತೀಶ್ ಜಾರಕಿಹೊಳಿ ಸ್ಪರ್ಧೆ ಮಾಡಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.