ಬೆಂಗಳೂರ –
ರಾಸಲೀಲೆ ಸಿಡಿಯಲ್ಲಿ ಕಾಣಿಸಿಕೊಂಡಿದ್ದ ಯುವತಿ ಯ ಪರವಾಗಿ ವಕೀಲ ಜಗದೀಶ್ ದೂರು ನೀಡಿದ ಬೆನ್ನಲ್ಲೇ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಸರ್ಕಾರಿ ಕೆಲಸ ಕೊಡಿಸುವುದಾಗಿ ಲೈಂಗಿಕ ಸಂಪರ್ಕ ನಡೆಸಿ, ವಿಡಿಯೋ ಕರೆ ಮಾಡಿ ಅಶ್ಲೀಲ ಮಾತುಗಳನ್ನಾಡಿ ನಗ್ನವಾಗಿ ಮಾತನಾಡಲು ಪುಸಲಾಯಿಸಿದ್ದಾರೆ.

ಅಲ್ಲದೇ, ಕೆಲಸ ಕೊಡಿಸದೆ ವಂಚಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಸಿಡಿ ಯುವತಿ ದೂರಿನಲ್ಲಿ ಆರೋಪಿಸಿದ್ದಾರೆ.ಸಿಡಿಯಲ್ಲಿದ್ದ ಯುವತಿಯ ಲಿಖಿತ ದೂರು ಆಧರಿಸಿ ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು ದಾಖಲಾಗಿದೆ.



ಐಪಿಸಿ ಸೆಕ್ಷನ್ 376 ಸಿ (ಅತ್ಯಾಚಾರ), 354 ಎ (ಕೆಲಸ ನೀಡುವುದಾಗಿ ನಂಬಿಸಿ ದೈಹಿಕ ಸಂಪರ್ಕ) 506 (ಜೀವ ಬೆದರಿಕೆ) 417(ವಂಚನೆ) ಅಡಿ ಅಲ್ಲದೇ ವಿಡಿಯೋ ಹೊರ ಹಾಕಿದ್ದಕ್ಕೆ ರಮೇಶ್ ಜಾರಕಿಹೊಳಿ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 67ರ ಅಡಿ ಪ್ರಕರಣ ದಾಖಲಾಗಿದೆ