ಮಂಗಳೂರು –
ಮದುವೆ ಸಮಾರಂಭಕ್ಕೆ ಬಂದಿದ್ದ ನಾಲ್ವರು ನದಿಗೆ ಈಜಾಟಕ್ಕೆ ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮೂಡಬಿದಿರೆಯಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಕಡಂದಲೆ ಎಂಬಲ್ಲಿ ಈ ಒಂದು ಘಟನೆ ನಡೆದಿದೆ.
ಕಡಂದಲೆ ಶಾಂಭವಿ ನದಿಯಲ್ಲಿ ಈ ಘಟನೆ ನಡೆದಿದ್ದು ಮೃತಪಟ್ಟವರನ್ನು ವಾಮಂಜೂರು ಮೂಡುಶೆಡ್ಡೆ ನಿವಾಸಿಗಳಾದ ನಿಖಿಲ್ , ಹರ್ಷಿತಾ , ವೇಣೂರಿನ ಸುಭಾಷ್ , ಬಜಪೆ ಪೆರಾರ ನಿವಾಸಿ ರವಿ ಎಂದು ಗುರುತಿಸಲಾಗಿದೆ.
ಕಡಂದಲೆಯ ಶ್ರೀಧರ್ ಆಚಾರ್ಯ ಎಂಬುವರ ಮನೆಗೆ ಮದುವೆ ಸಮಾರಂಭಕ್ಕೆ ಆಗಮಿಸಿದ್ದರು. ಮಧ್ಯಾಹ್ನ ಶಾಂಭವಿ ನದಿಗೆ ಇವರು ಸ್ನಾನಕ್ಕೆಂದು ತೆರಳಿದ್ದು, ಈ ಸಂದರ್ಭ ಆಯತಪ್ಪಿ ನೀರಿನಲ್ಲಿ ಮುಳುಗಿದ್ದಾರೆ.
ಇಬ್ಬರ ಶವವನ್ನು ಮೇಲಕ್ಕೆತ್ತಲಾಗಿದ್ದು, ಇನ್ನಿಬ್ಬರಿಗಾಗಿ ಹುಡುಕಾಟ ನಡೆಯುತ್ತಿದೆ. ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಇನ್ನೂ ಮದುವೆಗೆ ಮನೆಯಲ್ಲಿ ಸಂಭ್ರಮದ ಬದಲಿಗೆ ಸಾವಿನ ಸುದ್ದಿಯಿಂದ ಕುಟುಂಬದವರು ಕಂಗಾಲಾಗಿದ್ದಾರೆ.