ಮೊಟ್ಟೆ ಕೊಡೊದನ್ನು ನಿಲ್ಲಿಸದಿದ್ದರೆ ಮಕ್ಕಳನ್ನು ಶಾಲೆಗೆ ಕಳುಹಿಸುವೊ ದಿಲ್ಲ ದಯಾನಂದ ಸ್ವಾಮಿಜಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ರಾಜ್ಯದಲ್ಲಿ ನಿಲ್ಲದ ಮೊಟ್ಟೆ ರಾಜಕೀಯ…..

Suddi Sante Desk

ಕಲಬುರಗಿ –

ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮೊಟ್ಟೆ ಕೊಡುವುದನ್ನು ನಿಲ್ಲಿಸದಿದ್ದರೆ ನಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸುವುದನ್ನೇ ನಿಲ್ಲಿಸುತ್ತೇವೆ ಎಂದು ಅಖಿಲ ಭಾರತ ಸಸ್ಯಾಹಾರಿಗಳ ಒಕ್ಕೂಟದ ಪ್ರಧಾನ ಸಂಚಾಲಕ ದಯಾನಂದ ಸ್ವಾಮೀಜಿ ಹೇಳಿದರು.ಕೋಳಿ ಫಾರ್ಮ್‌ಗಳ ಮಾಲೀಕರ ಲಾಬಿಗೆ ಮಣಿದ ಸರ್ಕಾರ ಮಕ್ಕಳಿಗೆ ಮೊಟ್ಟೆ ತಿನ್ನಿಸುತ್ತಿದೆ. ಎಲ್ಲರೂ ಒಪ್ಪುವ ಮತ್ತು ಏಕರೂಪದ ಪೌಷ್ಟಿಕ ಆಹಾರ ನೀಡಬೇಕೇ ಹೊರೆತು, ಜ್ಞಾನ ದೇಗುಲದ ಶಾಲೆಗಳನ್ನು ಮಿಲ್ಟ್ರಿ ಹೋಟೆಲ್ ಮಾಡಿ ಮೊಟ್ಟೆ ಕೊಡಬಾರದು ಎಂದರು

ಸರ್ಕಾರ ತಕ್ಷಣವೇ ಮೊಟ್ಟೆ ನೀಡುವ ನಿರ್ಧಾರದಿಂದ ಹಿಂದೆ ಸರಿಯಬೇಕು. ಇಲ್ಲವೇ ರಾಜ್ಯದಾದ್ಯಂತ ಪ್ರತ್ಯೇಕ ಶಾಲೆ ಹಾಗೂ ಅಂಗನವಾಡಿ ತೆರೆಯಬೇಕು ಒಂದು ವೇಳೆ ಈ ಬೇಡಿಕೆಗೆ ಸ್ಪಂದಿಸದೆ ಇದ್ದಲ್ಲಿ ನಮ್ಮ ಅನುದಾನಿತ ಶಾಲೆ ಗಳು ಮೊಟ್ಟೆ ವಿತರಣೆಯನ್ನು ಸ್ಥಗಿತಗೊಳಿಸಿ ಸರ್ಕಾರದ ಅನುದಾನವನ್ನೂ ತಿರಸ್ಕರಸಲಿವೆ ನಾವೇ ಪ್ರತ್ಯೇಕ ಶಾಲೆಗಳನ್ನು ತೆರೆದು ಮರದ ಕೆಳಗೋ ಜೋಪಡಿ ಹಾಕಿ ಕೊಂಡು ತರಗತಿಗಳನ್ನು ನಡೆಸುತ್ತೇವೆ ಎಂದರು

ಶಾಲೆಯ ಆವರಣದಲ್ಲಿ ಸರ್ಕಾರ ಆಹಾರದ ವಿಷಯವಾಗಿ ಸಸ್ಯಾಹಾರ ಮತ್ತು ಮಾಂಸಾಹಾರ ಎಂಬ ತಾರತಮ್ಯ ಮಾಡಬಾರದು.ಒಂದು ವೇಳೆ ಮಕ್ಕಳಿಗೆ ಮೊಟ್ಟೆ ಕೊಡು ವುದು ಅತ್ಯವಶ್ಯವೇ ಇದ್ದರೇ ಪಾರ್ಸಲ್‌ ನೀಡಲಿ ಅದಕ್ಕೆ ನಮ್ಮ ಅಭ್ಯಂತರ ಇಲ್ಲ ನಮ್ಮ ಹೋರಾಟ ಶಾಲೆಗಳಲ್ಲಿ ಮೊಟ್ಟೆ ನೀಡುವುದಕ್ಕೆ ಹೊರತು ಮಾಂಸಾಹಾರದ ವಿರುದ್ಧ ವಲ್ಲ ಎಂದು ಒಕ್ಕೂಟದ ಪ್ರಧಾನ ಸಂಘಟಕ ಚನ್ನಬಸವಾ ನಂದ ಸ್ವಾಮೀಜಿ ಸ್ಪಷ್ಟಪಡಿಸಿದರು.ಮೊಟ್ಟೆ ಕೊಡುವ ನಿರ್ಧಾರವನ್ನು ಖಂಡಿಸಿ ಬೆಳಗಾವಿಯಲ್ಲಿ ಡಿಸೆಂಬರ್ 20ರಂದು ಬೆಳಿಗ್ಗೆ 10ಕ್ಕೆ ಸಂತ ಸಮಾವೇಶ ವಿಧಾನಸೌಧ ಚಲೋ ಚಳವಳಿ ಹಮ್ಮಿಕೊಳ್ಳಲಾಗಿದೆ ರಾಜ್ಯದ ನೂರಾರು ಮಠಾಧೀಶರು ಇದರಲ್ಲಿ ಭಾಗವಹಿಸುವರು ಎಂದರು

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.