ACB ಬಲೆಗೆ ಬಿದ್ದ ಇಬ್ಬರು ಅರಣ್ಯ ಇಲಾಖೆಯ ಅಧಿಕಾರಿಗಳು – ಹುಬ್ಬಳ್ಳಿಯ ವಲಯ ಅರಣ್ಯ ಕಚೇರಿಯಲ್ಲಿ ಟ್ರ್ಯಾಪ್…..

Suddi Sante Desk

ಹುಬ್ಬಳ್ಳಿ –

ಅರಣ್ಯ ಇಲಾಖೆಯ ಇಬ್ಬರು ಅಧಿಕಾರಿಗಳು ACB ಬಲೆಗೆ ಬಿದ್ದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.ಹುಬ್ಬಳ್ಳಿಯ ವಲಯ ಅರಣ್ಯ ಅಧಿಕಾರಿ ಕಚೇರಿಯಲ್ಲಿ ಈ ಒಂದು ಘಟನೆ ನಡೆದಿದೆ.ಮೃತರಾಗಿದ್ದ ವಾಚರ್ ಹುದ್ದೆಯ ಪರಿಹಾರ ಹಣವನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಅಧಿಕಾರಿಗಳು‌.3.50 ಲಕ್ಷ ರೂಪಾಯಿ ಪರಿಹಾರದ ಹಣ ಬಿಡುಗಡೆ ಮಾಡಲು 30 ಸಾವಿರ ರೂಪಾಯಿ ಬೇಡಿಕೆ ಇಟ್ಟಿದ್ದರು.ಈ ಒಂದು ಕುರಿತು ಎಸಿಬಿ ಅಧಿಕಾರಿಗಳಿಗೆ ದೂರನ್ನು ನೀಡಲಾಗಿತ್ತು.ದೂರಿನ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಮಾಡಿದ ಎಸಿಬಿ ಅಧಿಕಾರಿಗಳು ಹಣವನ್ನು ಸ್ವೀಕರಿಸುವ ಸಮಯದಲ್ಲಿ ಟ್ರ್ಯಾಪ್ ಮಾಡಿ ಇಬ್ಬರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ

ವಲಯ ಅರಣ್ಯ ಅಧಿಕಾರಿ ಅಣ್ಣದಾನಯ್ಯ ನೀಲಗುಂ ದಮಠ ಮತ್ತು ಕಂಪ್ಯೂಟರ್ ಆಪರೇಟರ್ ಶಿವಶಂಕರ ಹಿರೇಮಠ ಬಲೆಗೆ ಬಿದ್ದವರಾಗಿದ್ದಾರೆ‌.ಹುಬ್ಬಳ್ಳಿಯ ವಲಯ ಅರಣ್ಯ ಅಧಿಕಾರಿ ಕಚೇರಿಯಲ್ಲಿ ಟ್ರ್ಯಾಪ್ ಮಾಡಲಾಗಿದೆ. 15 ಸಾವಿರ ರುಪಾಯಿ ತಗೆದುಕೊಳ್ಳುವಾಗ ಟ್ರ್ಯಾಪ್ ಆಗಿದ್ದಾರೆ ಇಬ್ಬರು ಅರಣ್ಯ ಅಧಿಕಾರಿಗಳು.SP ಬಿ ಎಸ್ ನೇಮಗೌಡ ಮಾರ್ಗದರ್ಶನದಲ್ಲಿ DYSP ಮಹಾಂತೇಶ ಜಿದ್ದಿ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದೆ. ಇಬ್ಬರ ನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ಮಾಡುತ್ತಿದ್ದಾರೆ ACB ಅಧಿಕಾರಿಗಳು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.