ಕೊನೆಗೂ ಮುಕ್ತಿ ಸಿಕ್ಕಿತು ಹುಬ್ಬಳ್ಳಿ ಧಾರವಾಡ ಬೈ ಪಾಸ್ ಗೆ ಶೀಘ್ರ ದಲ್ಲೇ ನಿರ್ಮಾಣವಾಗಲಿದೆ 6 ಪಥದ ಎಕ್ಸ್‌ಪ್ರೆಸ್ 4 ಪಥದ ರಸ್ತೆಗೆ ಟೆಂಡರ್ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅಭಿವೃದ್ಧಿಗೆ ಮತ್ತೊಂದು ಸಾಕ್ಷಿ……

Suddi Sante Desk

ಧಾರವಾಡ –

ಹುಬ್ಬಳ್ಳಿ – ಧಾರವಾಡ ಬೈಪಾಸ್ 6 ಪಥದ ಎಕ್ಸ್‌ಪ್ರೆಸ್ 4 ಪಥದ ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಟೆಂಡರ್ ಕರೆಯ ಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.ಇಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನವದೆಹಲಿ ಇವರು ಹುಬ್ಬಳ್ಳಿ-ಧಾರವಾಡ ಬೈಪಾಸ್ 31 ಕಿಮೀ ರಸ್ತೆಯನ್ನು ಷಟ್ಪಥ ಎಕ್ಸ್‌ಪ್ರೆಸ್ ಹೈವೆ ಆಗಿ ಮಾರ್ಪ ಡಿಸಲು ಹಾಗೂ ನಾಲ್ಕು ಪಥದ ಸರ್ವಿಸ್ ರಸ್ತೆ ನಿರ್ಮಿಸಲು ಇ.ಪಿ.ಸಿ.ಮಾದರಿಯಲ್ಲಿ ಟೆಂಡರ್ ಕರೆಯಲಾಗಿದ್ದು ಆರು ಪಥದ ಎಕ್ಸ್‌ಪ್ರೆಸ್ ಗೆ ರಸ್ತೆ ಹಾಗೂ ಸಮರ್ಪಕವಾಗಿ ಎರಡೂ ಬದಿಯಲ್ಲಿ ದ್ವಿ ಪಥದ ಸರ್ವಿಸ್ ರಸ್ತೆಯನ್ನು ನಿರ್ಮಿಸಲು ಟೆಂಡರ್ ಕರೆಯಲಾಗಿದೆ ಎಂದರು.

ಈ ಬಗ್ಗೆ ಸಚಿವ ಜೋಶಿಯವರು ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆ ಮಾಡಿದ್ದು ಕಾಮಗಾರಿಗೆ ಇಂದು ಟೆಂಡರ್ ಕರೆಯಲಾಗಿದ್ದು ಫೆಬ್ರವರಿ 22 ಟೆಂಡರ್ ಸಲ್ಲಿಕೆಗೆ ಕೊನೆಯ ದಿನವಾಗಿದೆ ಕಾಮಗಾರಿ ಮುಗಿಸಲು 2.5 ವರ್ಷ ನಿಗದಿ ಗೊಳಿಸಲಾಗಿದೆ ಹಾಗೂ ನಿರ್ಮಾಣದ ನಂತರ 5 ವರ್ಷದ ನಿರ್ವಹಣೆಯನ್ನೂ ಗುತ್ತಿಗೆದಾರರೆ ನಿರ್ವಹಿಸುವ ಕರಾ ರೊಂದಿಗೆ ಟೆಂಡರ್‍ನಲ್ಲಿ ಸೂಚಿಸಲಾಗಿದೆ ಎಂದರು ಮುಖ್ಯ ವಾಗಿ ಈಗಿರುವ ಬೈಪಾಸ್‍ನ ಎಲ್ಲಾ ಟೋಲ್ ಪ್ಲಾಜಾಗ ಳನ್ನು ತೆಗೆದು ಕೇವಲ ಒಂದು ಟೋಲ್ ಪ್ಲಾಜಾ ಮಾತ್ರ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಈ ಟೋಲ್ ಕೆಲಗೇರಿ ಮತ್ತು ನರೆಂದ್ರ ಮದ್ಯೆ ಮಾಡಲಾಗಿದ್ದು ಇದರಿಂದ ಹುಬ್ಬಳ್ಳಿ ಧಾರವಾಡ ಮಧ್ಯ ಸಂಚರಿಸುವ ಪ್ರಯಾಣಿಕರು ಟೋಲ್ ನಿಂದ ವಿನಾಯಿತಿ ನೀಡಲಾಗಿದೆ.ಈ ಬೈಪಾಸ್ ನಿರ್ಮಾಣ ದಿಂದ ನಗರ ಮದ್ಯದೊಳಗಿನ ಸಂಚರಿಸುವ ವಾಹನ ದಟ್ಟಣೆ ಕಡಿಮೆಯಾಗಲಿದೆ ಎಂದೂ ಜೋಶಿಯವರು ತಿಳಿಸಿದ್ದಾರೆ.

ಪುಣೆ-ಬೆಂಗಳೂರು ಹೆದ್ದಾರಿ ವಿಸ್ತರಣೆ ಆಯಿತು. ಆದರೆ ಹು-ಧಾ ಬೈಪಾಸ್ ವಿಸ್ತರಣೆ ಆಗಿಲ್ಲ. 6 ಪಥದ ರಸ್ತೆಯಲ್ಲಿ ವೇಗವಾಗಿ ವಾಹನ ಚಲಾಯಿಸಿಕೊಂಡು ಬರುವ ಚಾಲ ಕರು ಬೈಪಾಸ್ ನಲ್ಲಿಯೂ ಅದೇ ವೇಗದಲ್ಲಿ ಬರುವುದ ರಿಂದ ಇಂತಹ ಅಪಘಾತಗಳು ಸಂಭವಿಸುತ್ತವೆ ಎಂಬುದು ತಜ್ಞರ ಅಭಿಪ್ರಾಯದೊಂದಿಗೆ ಬೈಪಾಸ್ ಕೂಡಾ ಕನಿಷ್ಠ 6 ಪಥಗಳಿಗೆ ವಿಸ್ತರಣೆ ಆಗಬೇಕೆಂಬುದು ಸಚಿವ ಜೋಶಿಯ ವರ ಆಗ್ರಹವಾಗಿತ್ತು.ಈ ಯೋಜನೆ ಒಟ್ಟು 1200 ಕೋಟಿ ರೂ. ವೆಚ್ಚದಲ್ಲಿ ಹುಬ್ಬಳಿಯ ಗಬ್ಬೂರು ಎನ್.ಹೆಚ್. 4 ರಸ್ತೆಯ 402.6 ಕಿಮಿ ಯಿಂದ ಧಾರವಾಡದ ನರೇಂದ್ರ ಕ್ರಾಸ್ ಬಳಿ 433.2 ಕಿಮಿ ವರೆಗಿನ ಒಟ್ಟು 31 ಕಿಮಿ 6 ಪಥದ ಎಕ್ಸ್‍ಪ್ರೆಸ್ ವೇ ಹಾಗೂ ನಾಲ್ಕು ಪಥದ ರಸ್ತೆ ನಿರ್ಮಾಣಕ್ಕೆ 800 ಕೋಟಿ ರೂ. ಹಾಗೂ ಭೂ ಸ್ವಾದೀನ ಡಿಪಿಆರ್ ತಯಾರಿಕೆ ಹಾಗೂ ಇನ್ನಿತರೆ ಕಾರ್ಯಕ್ಕೆ 400 ಕೋಟಿ ರೂ ಕೇಂದ್ರ ಸರಕಾರ ನೀಡಿದೆ ಎಂದು ಜೋಶಿ ಅವರು ಹೇಳಿದರು.ಈ ಬೈಪಾಸ್ ರಸ್ತೆಗೆ ಅನುಮೋದನೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಾರಿಗೆ ಸಚಿವರಾದ ನಿತಿನ್ ಗಡ್ಕರಿಯವರನ್ನು ಸಚಿವ ಜೋಶಿ ಯವರು ಅವಳಿ ನಗರದ ನಾಗರಿಕರ ಪರವಾಗಿ ಅಭಿನಂ ದಿಸಿದ್ದಾರೆ.

ವರದಿ – ಚಂದ್ರಶೇಖರ್

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.