ಧಾರವಾಡ –
ಧಾರವಾಡದ ಹಳಿಯಾಳ ರಸ್ತೆಯ ಹೊರವಲಯದ ರಸ್ತೆಯಲ್ಲಿ ಕಾರು ಮತ್ತು ಬೈಕ್ ನಡುವೆ ಮುಖಾ ಮುಖಿ ಡಿಕ್ಕಿಯಾದ ಘಟನೆ ನಡೆದಿದೆ.ಕಾರು ಮತ್ತು ಬೈಕ್ ನಡುವೆ ನಡೆದ ಈ ಒಂದು ಅಪಘಾತದಲ್ಲಿ ಬೈಕ್ ಸಂಪೂರ್ಣವಾಗಿ ನುಜ್ಜು ಗುಜ್ಜಾಗಿದೆ.
ಅಪಘಾತದಲ್ಲಿ ಬೈಕ್ ನಲ್ಲಿದ್ದ ಮೂವರು ಬೈಕ್ ಸವಾರರು ತೀವ್ರವಾಗಿ ಗಾಯಗೊಂಡಿದ್ದು ಸ್ಥಳದಲ್ಲಿ ಇದ್ದ ಸಾರ್ವಜನಿಕರು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದರು
ಇನ್ನೂ ಅಪಘಾತದ ಸುದ್ದಿ ತಿಳಿದು ಸ್ಥಳದಲ್ಲಿ ಇದ್ದ ಜಿಲಾನಿ ಖಾಜಿ ಧಾರವಾಡ ಸಂಚಾರಿ ಪೊಲೀಸರಿಗೆ ಮಾಹಿತಿ ನೀಡಿದ್ದು ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ಮಾಡತಾ ಇದ್ದಾರೆ. ಗಾಯ ಗೊಂಡಿರುವ ಬೈಕ್ ಸವಾರರ ಕುರಿತು ಮಾಹಿತಿ ಯನ್ನು ಕಲೆಹಾಕುತ್ತಿದ್ದಾರೆ ಇನ್ನೂ ಬೈಕ್ ಸವಾರರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ