ಬೆಂಗಳೂರು –
ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿ ಬಿ.ಎಂ.ಲಕ್ಷ್ಮೀ ಪ್ರಸಾದ್ ಸೇರಿ ರಾಜ್ಯದ ಮೂವರು ಐಪಿಎಸ್ ಅಧಿಕಾರಿ ಗಳನ್ನು ರಾಜ್ಯ ಸರಕಾರ ವರ್ಗಾವಣೆ ಮಾಡಿದೆ. ಯಾದಗಿರಿ ಜಿಲ್ಲೆಯಲ್ಲಿ ಎಸ್ಪಿಯಾಗಿದ್ದ ಎಸ್.ಆರ್. ಭಗವಾನ್ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿಯಾಗಿ ವರ್ಗಾಯಿಸಲಾಗಿದೆ.
ಶಿವಮೊಗ್ಗ ಎಸ್ಪಿಯಾಗಿರುವ ಕೆ.ಎಂ.ಶಾಂತರಾಜು ಅವರನ್ನು ಬೆಂಗಳೂರು ಪೂರ್ವದ ಸಂಚಾರ ವಿಭಾ ಗ ಡಿಸಿಪಿ ಆಗಿ, ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿ ಆಗಿದ್ದ ಬಿ.ಎಂ.ಲಕ್ಷ್ಮೀ ಪ್ರಸಾದ್ ಅವರನ್ನು ಶಿವಮೊಗ್ಗ ಜಿಲ್ಲೆಯ ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದೆ