ಚಿತ್ರದುರ್ಗ –
ಮುಂದೆ ಚಲಿಸುತ್ತಿದ್ದ ಲಾರಿಗೆ ಕಾರೊಂದು ಡಿಕ್ಕಿ ಯಾದ ಘಟನೆ ಚಿತ್ರದುರ್ಗ ದಲ್ಲಿ ನಡೆದಿದೆ. ಚಿತ್ರ ದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕೆ.ಆರ್. ಹಳ್ಳಿ ಗೇಟ್ ಬಳಿ ಈ ಒಂದು ಅಪಘಾತ ನಡೆದಿದೆ.

ಧಾರವಾಡದಿಂದ ಬೆಂಗಳೂರು ಕಡೆ ಹೋಗುವಾಗ ಘಟನೆ ನಡೆದಿದೆ.ಚಲಿಸುತ್ತಿದ್ದ ಲಾರಿಗೆ ಕಾರು ಹಿಂದಿ ನಿಂದ ಡಿಕ್ಕಿಯಾಗಿದ್ದು ಕಾರನ್ನು ಚಾಲನೆ ಮಾಡುತ್ತಿದ್ದ ಸದಾನಂದ ಸಜ್ಜನ್ ಸ್ಥಳದಲ್ಲಿ ಸಾವಿಗೀಡಾಗಿದ್ದಾರೆ.

ಇನ್ನೂ ಓರ್ವ ಸಾವಿಗೀಡಾದದರೆ ಕಾರಿನಲ್ಲಿದ್ದ ಇನ್ನೂ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು ಹಿರಿಯೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮನೋಜ್, (6), ಅಶ್ವಿನಿ ಸಜ್ಜನ್, (27) ಶ್ರೇಯಸ್,(7) ಕಸ್ತೂರಿ (62) ಗಾಯಾಳುಗಳಾಗಿದ್ದಾರೆ. ಇವರೆಲ್ಲರೂ ಧಾರವಾಡ ಜಿಲ್ಲೆಯವರಾಗಿದ್ದಾರೆ. ಹಿರಿಯೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಪೋಲಿಸ್ ಠಾಣೆಯ ಪಿಎಸ್ಐ ಪರಮೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ