ನವದೆಹಲಿ –
ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.ಕಳೆದ ಎರಡು ದಿನಗಳ ಹಿಂದೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟ ಹಿನ್ನಲೆಯಲ್ಲಿ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕ್ರಿಕೆಟ್ ದಂತ ಕತೆ ಎಂದೇ ಕರೆಯುತ್ತಿದ್ದಂತ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ 2 ದಿನಗಳ ಹಿಂದೆ ದೃಢಪಟ್ಟಿತ್ತು. ಹೀಗಾಗಿ ಹೋಂ ಐಸೋಲೇಷ ನ್ ಆಗಿ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಈ ಕುರಿತಂತೆ ಟ್ವಿಟ್ ಮಾಡಿರುವಂತ ಅವರು ನನ್ನ ಆರೋಗ್ಯ ಚೇತರಿಕೆಯ ಬಗ್ಗೆ ಹರಸಿ, ಹಾರೈಸಿದ ಎಲ್ಲರಿಗೂ ಧನ್ಯವಾದಗಳು. ಇಂದು ವೈದ್ಯರ ಸಲಹೆಯ ಮೇರೆಗೆ ಕೊರೋನಾ ಸೋಂಕಿನ ಚಿಕಿತ್ಸೆಗಾಗಿ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದೇನೆ. ಕೊರೋನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ.