ಬೆಳಗಾವಿ –
ಕೊರೊನಾ ಲಸಿಕೆ ತಗೆದುಕೊಂಡಿದ್ದ ವಿಧಾನಪರಿ ಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಅವರಿಗೂ ಕೋವಿಡ್-19 ದೃಢಪಟ್ಟಿದೆ. ಬೆಂಗಳೂರಿ ನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಹಾಂತೇಶ ಅವರು ಇತ್ತೀಚಿಗೆ ಕೋವಿಡ್ ಲಸಿಕೆಯ ಮೊದಲ ಡೋಸ್ ಪಡೆದಿದ್ದರು. ಈಗ ಕೋವಿಡ್ ಲಸಿಕೆ ಪಡೆದುಕೊಂಡ ನಂತರ ಈಗ ಮತ್ತೆ ಕೊರೊನಾ ಸೊಂಕು ಕಾಣಿಸಿಕೊಂಡಿದೆ
ಇನ್ನೂ ಸಧ್ಯ ಇವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಕೋವಿಡ್ ಕಾರಣದಿಂದಾಗಿ ಅವರು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಯಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಪ್ರಚಾರ ಕಾರ್ಯ ದಿಂದ ದೂರ ಉಳಿಯುವಂತಾಗಿದೆ.ಒಟ್ಟಾರೆ ಕೋವಿಡ್ ಲಸಿಕೆ ಪಡೆದುಕೊಂಡರು ಕೊರೊನಾ ಸೊಂಕು ಕಾಣಿಸಿಕೊಂಡಿದ್ದು ಮುಂದೇನು ಎಂಬ ಪ್ರಶ್ನೆ ಸಾರ್ವಜನಿಕರನ್ನು ಕಾಡುತ್ತಿದೆ.