ವಸ್ತ್ರ ಸಂಹಿತೆ ವಿಚಾರದಲ್ಲಿ ರಾಜ್ಯದ ಜನತೆಗೆ CM ಸಂದೇಶ ಮನವಿ ಮಾಡಿ ಹೇಳಿದ್ದೇನು ನೋಡಿ…..

Suddi Sante Desk

ನವದೆಹಲಿ –

ಸೌಹಾರ್ದತೆ ಹಾಗೂ ತಾಳ್ಮೆಯಿಂದ ವರ್ತಿಸುವಂತೆ ವಿದ್ಯಾರ್ಥಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ. ನವದೆಹಲಿ ಯಲ್ಲಿ ಮಾತನಾಡಿದ ಅವರು ವಿದ್ಯಾರ್ಥಿಗಳು ಸ್ವಯಂಪ್ರೇರಿತರಾಗಿ ಸೌಹಾರ್ದತೆ ಹಾಗೂ ತಾಳ್ಮೆಯಿಂದ ವರ್ತಿಸಬೇಕೆಂದು ಮುಖ್ಯಮಂತ್ರಿ ಬಸವ ರಾಜ ಬೊಮ್ಮಾಯಿ ಅವರು ವಿದ್ಯಾರ್ಥಿಗಳಲ್ಲಿ ಮನವಿ ಮಾಡಿದರು.

ನವದೆಹಲಿಯಲ್ಲಿ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವರನ್ನು ಭೇಟಿಯಾದ ನಂತರ ಮಾಧ್ಯಮದವರೊಂ ದಿಗೆ ಮಾತನಾಡಿದ ಅವರು ರಾಜ್ಯದ ಕಾಲೇಜುಗಳಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ ವಿವಿಧ ರಾಜ್ಯಗಳಲ್ಲಿ ಈ ವಿಷಯಕ್ಕೆ ಸಂಬಂಧಿ ಸಿದಂತೆ ಹಲವಾರು ತೀರ್ಪುಗಳು ಬಂದಿವೆ. ಕರ್ನಾಟಕದ ಉಚ್ಛ ನ್ಯಾಯಾಲಯದಲ್ಲಿ ವಸ್ತ್ರ ಸಂಹಿತೆಯ ಬಗ್ಗೆ ವಿಚಾರಣೆ ನಡೆಯುತ್ತಿದೆ.ಸಂವಿಧಾನ ಮತ್ತು ಕಾನೂನಿನ ನ್ವಯ ಹೈಕೋರ್ಟ್ ಸೂಕ್ತ ತೀರ್ಪನ್ನು ನೀಡಲಿದೆ ಎಂದರು

ಎಲ್ಲಾ ವಿದ್ಯಾರ್ಥಿಗಳು ಒಟ್ಟಿಗೆ ಕೂತು ವಿದ್ಯೆ ಕಲಿಯುವಂ ತಾಗಬೇಕು.ವಿದ್ಯಾರ್ಥಿಗಳ ಭದ್ರ ಭವಿಷ್ಯಕ್ಕೆ ವಿದ್ಯಾರ್ಜನೆ ಬಹಳ ಮುಖ್ಯ ವಿದ್ಯಾರ್ಥಿಗಳು ಸ್ವಯಂಪ್ರೇರಣೆಯಿಂದ ಶಾಂತಿ ಸುವ್ಯವಸ್ಥೆಗೆ ಧಕ್ಕೆಯಾಗದಂತೆ ನಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.ಇನ್ನೂ ಈ ವಿಚಾರ ಅತ್ಯಂತ ಸೂಕ್ಷ್ಮವಾಗಿದ್ದು ಯಾರೂ ಕೂಡ ಪ್ರಚೋದನಾತ್ಮಕ ಹೇಳಿಕೆ ಗಳನ್ನು ನೀಡಬಾರದು.ವಸ್ತ್ರ ಸಂಹಿತೆ ಜಾರಿಯ ಬಗ್ಗೆ ಉಚ್ಛನ್ಯಾಯಾಲಯದಿಂದ ತೀರ್ಪು ಬರುವವರೆಗೆ ವಿದ್ಯಾರ್ಥಿಗಳು ತಾಳ್ಮೆಯಿಂದ ವರ್ತಿಸಬೇಕೆಂದು ಮುಖ್ಯ ಮಂತ್ರಿಗಳು ಮನವಿ ಮಾಡಿದರು.

ಶಾಂತಿ ಸುವ್ಯವಸ್ಥೆಯನ್ನು ಕಾಪಾಡಲು ಪೊಲೀಸ್ ಇಲಾಖೆಗೂ ನಿರ್ದೇಶನ ನೀಡಲಾಗಿದೆ.ಒಟ್ಟಾರೆ ವಸ್ತ್ರ ಸಂಹಿತೆಯ ವಿಚಾರ ಇತ್ಯರ್ಥವಾಗುವವರೆಗೂ ಯಾರೂ ಕೂಡ ಶಾಂತಿ ಕದಡುವ ಕೆಲಸಕ್ಕೆ ಕೈಹಾಕಬಾರದು ಎಂದು ತಿಳಿಸಿದರು.ಪ್ರತಿ ಪಕ್ಷಗಳ ಆರೋಪದಲ್ಲಿ ಯಾವುದೇ ಹುರುಳಿಲ್ಲ.ಕರ್ನಾಟಕದಲ್ಲಿ ಆಡಳಿತ ಪಕ್ಷವಾಗಿ ಎಲ್ಲ ಜವಾಬ್ದಾರಿಗಳನ್ನು ಕಾನೂನು ಮತ್ತು ಶಾಂತಿ ಸುವ್ಯವಸ್ಥೆ ಯನ್ನು ನಿರ್ವಹಿಸಲಾಗುತ್ತಿದೆ.ವಸ್ತ್ರಸಂಹಿತೆಯ ಬಗ್ಗೆ ರಾಜ್ಯ ಸರ್ಕಾರ ತನ್ನ ನಿಲುವನ್ನು ನ್ಯಾಯಾಲಯಕ್ಕೆ ಈಗಾಗಲೇ ಸ್ಪಷ್ಟಪಡಿಸಿದ್ದು ನ್ಯಾಯಾಲಯದ ಪರಿಶೀಲನೆಯಲ್ಲಿದೆ. ನ್ಯಾಯಾಲಯದ ತೀರ್ಪಿಗೆ ಸರ್ಕಾರ ಬದ್ಧವಾಗಿರಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.