ಚಿತ್ರದುರ್ಗ –
ಚಿತ್ರದುರ್ಗ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಶಿಕ್ಷಣ ಸಚಿವ ಸಚಿವ ಸುರೇಶ್ ಕುಮಾರ ಸಭೆ ಮಾಡುತ್ತಿದ್ದಾರೆ.ನಾಲ್ಕು ಜಿಲ್ಲೆಗಳ ಡಿಡಿಪಿಐ ಅಧಿಕಾರಿ ಗಳೊಂದಿಗೆ ಈ ಒಂದು ಸಭೆಯನ್ನು ಹಮ್ಮಿಕೊಳ್ಳ ಲಾಗಿದೆ.ಇನ್ನೂ ಸಭೆ ಆರಂಭವಾಗಿದ್ದು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಈ ಒಂದು ಸಭೆ ನಡೆಯುತ್ತಿದ್ದು ಸಭೆಯಲ್ಲಿ ಪ್ರಮುಖವಾಗಿ ಈ ಒಂದು ಶೈಕ್ಷಣಿಕ ಪ್ರಗತಿ ಪರಿಶೀಲನೆ ಸೇರಿದಂತೆ ಹಲವಾರು ವಿಚಾರಗಳ ಕುರಿತಂತೆ ಚರ್ಚೆಯನ್ನು ಶಿಕ್ಷಣ ಸಚಿವರು ಮಾಡತಾ ಇದ್ದಾರೆ
ಆರಂಭಗೊಂಡ ಈ ಒಂದು ಸಭೆಯಲ್ಲಿ ಯಾವ ವಿಚಾರ ಕುರಿತಂತೆ ಚರ್ಚೆ ಮಾಡಲಾಗುತ್ತಿದೆ ಎಂಬ ಕುರಿತಂತೆ ಕುತೂಹಲ ಮೂಡಿದ್ದು ಸಭೆಗೆ ಮಾಧ್ಯಮ ಗಳಿಗೆ ನಿಷೇಧ ವನ್ನು ಜಿಲ್ಲಾಡಳಿತ ಮಾಡಿದೆ.
ಮಧುಗಿರಿ, ತುಮಕೂರು, ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಯ ಡಿಡಿಪಿಐ ಗಳು ಸಭೆಯಲ್ಲಿ ಭಾಗಿಯಾಗಿದ್ದು ಶೈಕ್ಷಣಿಕ ವಿಚಾರಗಳ ಬಗ್ಗೆ ಮತ್ತು ಇನ್ನಿತರ ವಿಚಾರಗಳ ಕುರಿತಂತೆ ಶಿಕ್ಷಣ ಸಚಿವರು ಅಧಿಕಾರಿಗಳೊಂದಿಗೆ ಚರ್ಚಿಸುತ್ತಿದ್ದಾರೆ.
ಇದರೊಂದಿಗೆ ಪ್ರಮುಖವಾಗಿ ಎಸ್ ಎಸ್ ಎಲ್ ಸಿ ಪರೀಕ್ಷಾ ಸಿದ್ದತೆ ಬಗ್ಗೆ ಹಾಗೇ ಶಿಕ್ಷಕರ ವರ್ಗಾವಣೆ ಕುರಿತಂತೆ ಅಧಿಕಾರಿಗಳೊಂದಿಗೆ ಸಚಿವರು ಚರ್ಚಿಸಿ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ