ಮುಂಬಯಿ –
IPL ನಲ್ಲಿನ ಆಡಿದ ಮೊದಲ ಪಂದ್ಯದಲ್ಲಿ ಸೋತು ಕಂಗಾಲಾಗಿರುವ ಮಹೇಂದ್ರಸಿಂಗ್ ಧೋನಿ ಸಾರಥ್ಯದ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಐಪಿ ಎಲ್ ಟಿ-20 ಟೂರ್ನಿಯಲ್ಲಿ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.ಆಡಿದ ಮೊದಲ ಪಂದ್ಯದಲ್ಲೇ ಸೋತಿದ್ದೂ ಅಲ್ಲದೇ ನಿಧಾನಗತಿ ಬೌಲಿಂಗ್ ಗಾಗಿ ದಂಡವನ್ನು ತೆರಬೇಕಾಗಿದೆ.

ಹೌದು ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ನಿಧಾನಗತಿ ಬೌಲಿಂಗ್ ಮಾಡಿದ್ದಕ್ಕಾಗಿ ಚೆನ್ನೈ ಸೂಪರ್ ಕಿಂಗ್ಸ್ ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಈ ಮೂಲಕ ದಂಡಕ್ಕೆ ಒಳಗಾದ ಮೊದಲ ತಂಡ ಎಂಬ ಕುಖ್ಯಾತಿಗೂ ಚೆನ್ನೈ ಪಾತ್ರವಾಯಿತು.

ಮೂರು ಬಾರಿಯ ಚಾಂಪಿಯನ್ ಆಗಿರುವ ಚೆನ್ನೈ ಸೂಪರ್ ಕಿಂಗ್ಸ್ ಮೊದಲ ಪಂದ್ಯದಲ್ಲೇ 7 ವಿಕೆಟ್ ಸೋಲುಂಡಿತ್ತು. ಮೊದಲು ಬ್ಯಾಟ್ ಮಾಡಿದ ಧೋನಿ ಪಡೆ 7 ವಿಕೆಟ್ ಗೆ 189 ರನ್ ಗಳಿಸಿದರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡ ಶಿಖರ್ ಧವನ್ ಮತ್ತು ಪೃಥ್ವಿ ಶಾ ಅವರ ಸಿಡಿಲಬ್ಬರದ ಅರ್ಧಶತಕಗಳ ನೆರವಿನಿಂದ 18.4 ಓವರ್ ಗಳಲ್ಲಿ ಕೇವಲ 3 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು. 7 ವಿಕೆಟ್ ಗಳಿಂದ ಸೋಲುಂಡ ಚೆನ್ನೈ ಮೊದಲ ಪಂದ್ಯದಲ್ಲೇ ಗೆಲುವಿನ ಖಾತೆ ತೆರೆಯಲು ವಿಫಲವಾಯಿತು.ಇನ್ನೂ ನಿಧಾನಗತಿಯ ಬೌಲಿಂಗ್ ಗಾಗಿ ಈಗ ದಂಡವನ್ನು ವಿಧಿಸಲಾಗಿದ್ದು ಗಾಯದ ಮೇಲೆ ಬರೆ ಎಳೆದಂತಾ ಗಿದೆ