ಹೊರಬಿತ್ತು PUC ಎರಡನೇ ವರ್ಷದ ಪರೀಕ್ಷಾ ವೇಳಾಪಟ್ಟಿ ಎಪ್ರಿಲ್ 22 ರಿಂದ ನಡೆಯಲಿವೆ ಪರೀಕ್ಷೆ ಗಳು…..

Suddi Sante Desk

ಬೆಂಗಳೂರು –

2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದ್ದು ಎ. 22 ರಿಂದ ಮೇ 18 ರ ವರೆಗೆ ನಿಗದಿಪಡಿಸಲಾಗಿದೆ.ತಾತ್ಕಾಲಿಕ ವೇಳಾಪಟ್ಟಿಯಲ್ಲಿ ಎ. 22ರಿಂದ ಮೇ 11ರ ವರೆಗೆ ಪರೀಕ್ಷೆ ನಡೆಸಲು ನಿರ್ಧರಿಸಲಾಗಿತ್ತು.ಇದೇ ವೇಳೆ ಕ್ಲಾಟ್‌, ಯುಜಿಎಟಿ ಎಕ್ಸಾಂ ಮತ್ತು ನವೋದಯ ವಿದ್ಯಾಲಯ ಪರೀಕ್ಷೆಗಳು ನಡೆಯುತ್ತಿರುವುದರಿಂದ ವಿದ್ಯಾರ್ಥಿಗಳಿಂದ ಬಂದಂತಹ ಆಕ್ಷೇಪಣೆಗಳನ್ನು ಪರಿಗಣಿಸಿ ಕೆಲವು ಬದಲಾ ವಣೆ ಮಾಡಲಾಗಿದೆ.

ಇನ್ನೂ ಎಲ್ಲಾ ಪರೀಕ್ಷೆಗಳು ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರ ವರೆಗೆ ನಡೆಯಲಿವೆ ಎಂದು ಪಿಯು ಇಲಾಖೆ ನಿರ್ದೇಶಕರು ತಿಳಿಸಿದ್ದಾರೆ.

ವೇಳಾಪಟ್ಟಿ
ಎ. 22 : ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಎ. 23 : ಗಣಿತ ಶಾಸ್ತ್ರ, ಶಿಕ್ಷಣ
ಎ. 25 : ಅರ್ಥಶಾಸ್ತ್ರ
ಎ. 26 : ಹಿಂದೂಸ್ಥಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ
ಎ. 27 : ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್‌
ಎ. 28 : ಕನ್ನಡ, ಅರೇಬಿಕ್‌
ಮೇ 2 : ಭೂಗೋಳಶಾಸ್ತ್ರ, ಜೀವಶಾಸ್ತ್ರ
ಮೇ 4 : ಮಾಹಿತಿ ತಂತ್ರಜ್ಞಾನ, ರೀಟೈಲ್‌, ಆಟೋಮೊಬೈಲ್‌, ಹೆಲ್ತ್‌ಕೇರ್‌, ಬ್ಯೂಟಿ ಆಯಂಡ್‌ ವೆಲ್‌ನೆಸ್‌
ಮೇ 5 : ಇಂಗ್ಲಿಷ್‌
ಮೇ 10 : ಇತಿಹಾಸ, ಭೌತಶಾಸ್ತ್ರ
ಮೇ 12 : ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಮೇ 14 : ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
ಮೇ 17 : ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
ಮೇ 18 : ಹಿಂದಿ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.