ಬೆಂಗಳೂರು –
ಕೆಲಸವಿಲ್ಲದೇ ಮನೆಯಲ್ಲಿದ್ದು ಖಿನ್ನತೆಗೆ ಒಳಗಾಗಿದ್ದ ಶಿಕ್ಷಕಿಯೊಬ್ಬರು ಮನೆಯಲ್ಲಿಯೇ ಆತ್ಮಹತ್ಯೆ ಮಾಡಿ ಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಹೌದು ಕೊರೋನಾ ಹೊಡೆತಕ್ಕೆ ಶಿಕ್ಷಕ ಸಮುದಾಯ ಕೂಡಾ ಸಂಕಷ್ಟಕ್ಕೆ ಒಳಗಾಗಿದೆ. ಈ ಕುರಿತು ಸರ್ಕಾರಕ್ಕೆ ನೂರು ಮನವಿ ನೀಡಿದರೂ ತಲೆ ಕೆಡಿಸಿಕೊಂಡಿಲ್ಲ. ಇನ್ನೂ ಒಂದು ವರ್ಷದಿಂದ ಕೆಲಸವಿಲ್ಲದೇ ಖಿನ್ನತೆಗೆ ಒಳಗಾಗಿದ್ದ ಏಕಲವ್ಯ ಪ್ರಶಸ್ತಿ ಪುರಸ್ಕೃತೆ ಹಾಗೇ ಈಜುಪಟು ಆಗಿದ್ದರು.ಕೆಲಸವಿಲ್ಲದ ಕಾರಣ ಬೇಸ ತ್ತು ಶಿಕ್ಷಕಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ.
ಹೌದು ರಾಷ್ಟ್ರಮಟ್ಟದ ಈಜುಪಟು, 2019ರಲ್ಲಿ ಏಕಲವ್ಯ ಪ್ರಶಸ್ತಿ ಪುರಸ್ಕೃತೆ ಜಿ.ಬಿ. ಶಿಲ್ಪಾ (41) ಜಯನಗರದ ಮಾರೇನಹಳ್ಳಿ ನಿವಾಸಿಯಾಗಿದ್ದು ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿಯಾಗಿದ್ದಾರೆ.ಇನ್ನೂ ಆತ್ಮಹತ್ಯೆಗೂ ಮುನ್ನ ಶಿಲ್ಪಾ ಅವರು ಡೆತ್ ನೋಟ್ ಬರೆದಿಟ್ಟಿದ್ದಾರೆ. ಶಿಲ್ಪಾ ಮತ್ತು ನೀಲ ಕೃಷ್ಣ ಪ್ರಸಾದ್ ದಂಪತಿ ಅನ್ಯೋನ್ಯವಾಗಿಯೇ ಇದ್ದರು. ನಾಲ್ಕು ತಿಂಗಳ ಹಿಂದಷ್ಟೇ ಶಿಲ್ಪಾ ಅವರ ತಾಯಿ ಸಾವನ್ನ ಪ್ಪಿದ್ದರು. ಪ್ರತಿಷ್ಠಿತ ಶಾಲೆಯಲ್ಲಿ ಕ್ರೀಡಾ ಶಿಕ್ಷಕಿಯಾಗಿ ದ್ದ ಶಿಲ್ಪಾ ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಕೆಲಸ ಕಳೆದುಕೊಂಡಿದ್ದರು. ಕೆಲವು ದಿನಗಳ ಹಿಂದ ಷ್ಟೇ ಆಡಳಿತ ಮಂಡಳಿಗೆ ಪತ್ರ ಬರೆದು ಕೆಲಸಕ್ಕೆ ಸೇರಿಸಿಕೊಳ್ಳುವಂತೆ ಮನವಿ ಮಾಡಿದ್ದರು.ಕೊರೋ ನಾ ಹಿನ್ನೆಲೆಯಲ್ಲಿ ಶಿಲ್ಪಾ ಅವರ ಮನವಿಯನ್ನು ಪರಿಗಣಿಸಿರಲಿಲ್ಲ. ಒಂದು ವರ್ಷದಿಂದ ಕೆಲಸವಿಲ್ಲ ದೇ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದ ಶಿಲ್ಪಾ ಅವರು ಖಿನ್ನತೆಗೆ ಒಳಗಾಗಿದ್ದರು.
ಭಾನುವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಿಟಕಿಗೆ ನೇಣು ಹಾಕಿಕೊಂಡು ಶಿಲ್ಫಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿ ಮನೆಗೆ ಬಂದಾಗ ಈ ಪ್ರಕರಣ ಬೆಳಕಿಗೆ ಬಂದಿದ್ದು, ಜಯನಗರ ಪೊಲೀಸ ರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಇನ್ನೂ ಆತ್ಮ ಹತ್ಯೆ ಮಾಡಿಕೊಂಡ ಶಿಕ್ಷಕಿಯ ಸಾವಿಗೆ ರಾಜ್ಯದ ಶಿಕ್ಷಕ ಸಮುದಾಯ ಕಂಬನಿ ಮಿಡಿಯುತ್ತಿದೆ