ಸೋನಿಯಾ ಗಾಂಧಿ, ರಾಹುಲ್, ಪ್ರಿಯಾಂಕಾ ಗಾಂಧಿ ರಾಜೀನಾಮೆ ಐದು ರಾಜ್ಯಗಳಲ್ಲಿ ಕಾಂಗ್ರೆಸ್ ಹೀನಾಯ ಸೋಲಿನಿಂದ ನೈತಿಕ ಹೊಣೆಹೊತ್ತು ಅಚ್ಚರಿ ನಿರ್ಧಾರ

Suddi Sante Desk

ನವದೆಹಲಿ –

ಪಂಚ ರಾಜ್ಯಗಳಲ್ಲಿನ ಚುನಾವಣೆಯಲ್ಲಿನ ಫಲಿತಾಂಶ ದಿಂದ ಕಾಂಗ್ರೇಸ್ ಪಕ್ಷದ ಹೀನಾಯ ಸೋಲಿನಿಂದಾಗಿ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ,ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ನೈತಿಕ ಹೊಣೆಯನ್ನು ಹೊತ್ತು ಕೊಂಡು ರಾಜೀನಾಮೆಯನ್ನು ನೀಡಲು ಮುಂದಾಗಿದ್ದಾರೆ ಹೌದು ಐದು ರಾಜ್ಯಗಳಲ್ಲಿನ ವಿಧಾನಸಭಾ ಚುನಾವಣೆ ಯಲ್ಲಿ ಕಾಂಗ್ರೆಸ್‌ ನ ಕಳಪೆ ಸಾಧನೆಗೆ ನೈತಿಕ ಹೊಣೆ ಹೊತ್ತು ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ಅವರ ಮಕ್ಕಳಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಇಂದು ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ(ಸಿಡಬ್ಲ್ಯುಸಿ) ಸಭೆಯಲ್ಲಿ ರಾಜೀ ನಾಮೆ ನೀಡುವ ನಿರೀಕ್ಷೆ ಇದೆ.

ಈ ಕುರಿತಂತೆ ಖಾಸಗಿ ವಾಹಿನಿ ಯೊಂದು ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ರಾಜೀನಾಮೆ ನೀಡಲು ಮುಂದಾಗಿರು ವುದು ಇದೇ ಮೊದಲ ಉದಾಹರಣೆಯಲ್ಲ.2014 ರಲ್ಲಿ ಕಾಂಗ್ರೆಸ್‌ ನ ಕಳಪೆ ಪ್ರದರ್ಶನದ ನಂತರ ಇಬ್ಬರೂ ನಾಯಕರು ತೊರೆಯಲು ಮುಂದಾಗಿದ್ದರು ಆದರೆ ಪ್ರಸ್ತಾವನೆಯನ್ನು CWC ತಿರಸ್ಕರಿಸಿತ್ತು.ಇನ್ನೂ ಐದು ರಾಜ್ಯಗಳಲ್ಲಿನ ಚುನಾವಣಾ ಸೋಲು ಮತ್ತು ಪ್ರಸ್ತುತ ರಾಜಕೀಯ ಪರಿಸ್ಥಿತಿ ಕುರಿತು ಚರ್ಚಿಸಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಭಾನುವಾರ ಸಭೆ ಸೇರಲಿದೆ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಕಚೇರಿ ಯಲ್ಲಿ ಸಂಜೆ 4 ಗಂಟೆಗೆ ಸಭೆ ನಡೆಯಲಿದೆ.ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರಾಗಿರುವ ಕಾಂಗ್ರೆಸ್ ಜಿ-23 ನಾಯಕರು ಸಿಡಬ್ಲ್ಯೂಸಿ ಸಭೆಯಲ್ಲಿ ಪಕ್ಷದಲ್ಲಿ ಸುಧಾರಣೆಗಳ ಬೇಡಿಕೆಯನ್ನು ಎತ್ತಲಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.ಸಿಡಬ್ಲ್ಯುಸಿ ಸಭೆಯಲ್ಲಿ ಪಕ್ಷದ ನಾಯಕರು ಪಕ್ಷದ ಆಂತರಿಕ ಚುನಾವಣೆಗೆ ಬೇಡಿಕೆ ಮಂಡಿಸುವ ನಿರೀಕ್ಷೆಯಿದೆ 2019 ರಲ್ಲಿ ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ, ಕಾಂಗ್ರೆಸ್‌ಗೆ ಶಾಶ್ವತ ಬದಲಿಯನ್ನು ಹುಡುಕಲು ಸಾಧ್ಯವಾಗಲಿಲ್ಲ, ಅಂದಿನಿಂದ ಸೋನಿಯಾ ಗಾಂಧಿ ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿ ರ್ವಹಿಸುತ್ತಿದ್ದಾರೆ.2024ರ ಲೋಕಸಭೆ ಚುನಾವಣೆಗೆ ತನ್ನ ಭವಿಷ್ಯವನ್ನು ಪುನರುಜ್ಜೀವನಗೊಳಿಸಲು ಮತ್ತು ಅದನ್ನು ಬದಲಿಸಲು ಆಮ್ ಆದ್ಮಿ ಪಕ್ಷ(ಎಎಪಿ) ಮತ್ತು ತೃಣಮೂಲ ಕಾಂಗ್ರೆಸ್‌ನಿಂದ ಉದಯೋನ್ಮುಖ ಸವಾಲನ್ನು ಹಿಮ್ಮೆಟ್ಟಿ ಸಲು ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್‌ ಗೆ ಐದು ವಿಧಾನಸಭಾ ಚುನಾವಣೆಗಳ ಫಲಿತಾಂಶವು ಆಘಾತವನ್ನುಂಟು ಮಾಡಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.