ದೆಹಲಿ –
ದಿನದಿಂದ ದಿನಕ್ಕೆ ದೇಶದೆಲ್ಲೆಡೆ ಹೆಚ್ಚುತ್ತಿರುವ ಕೊರೊನಾ ಎರಡನೇ ಅಲೆಯಿಂದಾಗಿ ಶೈಕ್ಷಣಿಕ ವಲಯ ಮತ್ತೆ ಸಂಕಷ್ಟಕ್ಕೆ ಸಿಲುಕಿದೆ. ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದಾಗಿ ಸಿಬಿಎಸ್ಇ ಬೋರ್ಡ್ 10 ಮತ್ತು 12ನೇ ತರಗತಿಗ ಳಿಗೆ ಪರೀಕ್ಷೆಗಳನ್ನು ನಡೆಸುವ ಕುರಿತು ಪ್ರಧಾನಿ ನರೇಂದ್ರ ಮೋದಿ ಶಿಕ್ಷಣ ಇಲಾಖೆಯೊಂದಿಗೆ ಸಭೆ ನಡೆಸಿದರು
ವಿವಿಧ ರಾಜ್ಯಗಳ ಅಭಿಪ್ರಾಯವನ್ನು ಸಂಗ್ರಹಿಸಿ ಪರಿಸ್ಥಿತಿಯನ್ನು ಅವಲೋಕಿಸಿದ ನಂತರ 10ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಿ, 12ನೇ ತರಗತಿ ಪರೀಕ್ಷೆಯ ದಿನಾಂಕ ಮುಂದೂಡಿ ಆದೇಶ ಹೊರಡಿ ಸಲಾಯಿತು ಈ ಸಂದರ್ಭ ವಿದ್ಯಾರ್ಥಿಗಳ ಹಿತರಕ್ಷಣೆ ಮುಖ್ಯ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದರು
ಸದ್ಯದ ಪರಿಸ್ಥಿತಿಯಲ್ಲಿ ಪರೀಕ್ಷೆ ನಡೆಸುವುದು ಕಷ್ಟ ವಿದೆ ಹಾಗಂತ ಆನ್ ಲೈನ್ ಪರೀಕ್ಷೆ ನಡೆಸಿದರೂ ದೇಶದ ಎಲ್ಲಾ ಭಾಗಗಳ ಮಕ್ಕಳಿಗೂ ಒಂದೇ ತೆರ ನಾಗಿ ತಂತ್ರಜ್ಞಾನ ಸೌಲಭ್ಯ ಸಿಗುತ್ತಿದೆ ಎಂದು ಹೇಳ ಲಾಗುವುದಿಲ್ಲ ಎಂಬ ಮಾತುಗಳು ಸಭೆಯಲ್ಲಿ ಕೇಳಿ ಬಂದವು
ಹೀಗಾಗಿ 12ನೇ ತರಗತಿ ಪರೀಕ್ಷೆಯನ್ನು ಮುಂದೂಡ ಲಾಗಿದೆ ಅತಿ ಶೀಘ್ರದಲ್ಲಿ ಪರೀಕ್ಷಾ ದಿನಾಂಕವನ್ನು ತಿಳಿಸಲಾಗುವುದು ಹಾಗೂ 10ನೇ ತರಗತಿ ಪರೀಕ್ಷೆ ಯನ್ನು ರದ್ದುಗೊಳಿಸಲಾಗಿದೆ ಎಂದರು