ದಾಂಡೇಲಿಯಲ್ಲಿ ಹುಬ್ಬಳ್ಳಿ ಧಾರವಾಡ ಬಿಜೆಪಿ ಟೀಮ್ ಶಾಸಕ ಅರವಿಂದ ಬೆಲ್ಲದ ಸೇರಿದಂತೆ ಹಲವರು ಕಾರ್ಯಾಗಾರದಲ್ಲಿ ಭಾಗಿ

Suddi Sante Desk

ದಾಂಡೇಲಿ –

ದಾಂಡೇಲಿ ಯಲ್ಲಿ ಭಾರತೀಯ ಜನತಾ ಪಕ್ಷ, ಹುಬ್ಬಳ್ಳಿ ಧಾರವಾಡ ಮಹಾನಗರ ಮತ್ತು ಜಿಲ್ಲೆಯ ಪಕ್ಷದ ಜಿಲ್ಲಾ ಪತಿಕ್ಷಣ ವರ್ಗದ ಕಾರ್ಯಾಗಾರ ನಡೆಯುತ್ತಿದೆ. ದಾಂಡೇಲಿ ಯ ಖಾಸಗಿ ಹೊಟೇಲ್ ನಲ್ಲಿ ಹಮ್ಮಿಕೊಂಡಿರುವ ಈ ಒಂದು ವಿಶೇಷ ಕಾರ್ಯಾಗಾರದಲ್ಲಿ ಹುಬ್ಬಳ್ಳಿ ಧಾರವಾಡ ಪಶ್ಛಿಮ ವಿಧಾನ ಸಭಾ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಪಾಲ್ಗೊಂಡು ಕೆಲವೊಂದಿಷ್ಟು ಸಲಹೆ ಸೂಚನೆಗಳನ್ನು ನೀಡಿದರು.

ಅವಳಿ ನಗರದ ಸೇರಿದಂತೆ ಜಿಲ್ಲೆಯಿಂದ ಹಲವಾರು ಕಾರ್ಯಕರ್ತರು ಮುಖಂಡರು ಈ ಒಂದು ಜಿಲ್ಲಾ ಪ್ರತಿಕ್ಷಣ ವರ್ಗದ ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದು ಇದರಲ್ಲಿ ಭಾಗವಹಿಸಿದ ಶಾಸಕರು ಪಕ್ಷದ ಮುಖಂಡರು ಹಾಗೂ ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು.ಈ ಸಂದರ್ಭದಲ್ಲಿ ಜಿಲ್ಲೆಯ ಪ್ರಧಾನ ಕಾರ್ಯದರ್ಶಿಗಳು, ಉಪಾಧ್ಯಕ್ಷರು,ಮಂಡಲ ಅಧ್ಯಕ್ಷರು,ಪ್ರಧಾನ ಕಾರ್ಯದ ರ್ಶಿಗಳು,ವಿವಿಧ ಮೋರ್ಚಾ ಅಧ್ಯಕ್ಷರು ಹಾಗೂ ಪದಾಧಿ ಕಾರಿಗಳು ಉಪಸ್ಥಿತರಿದ್ದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.