ಬೆಂಗಳೂರು –
ರಾಜ್ಯದಲ್ಲಿ ’೧ ರಿಂದ ೯ನೇ ತರಗತಿ’ ಪರೀಕ್ಷೆ ಇಲ್ಲದೇ ಪಾಸ್ – ಶಿಕ್ಷಣ ಇಲಾಖೆ ಆದೇಶವನ್ನು ಹೊರಡಿಸಿದೆ
ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಇಂತಹ ಸಂದರ್ಭದಲ್ಲಿ ರಾಜ್ಯದಲ್ಲಿ ೧ ರಿಂದ ೯ನೇ ತರಗತಿ ಪರೀಕ್ಷೆ ನಡೆಸೋದು ಕಷ್ಟ ಎಂಬುದಾಗಿ ತಜ್ಞರು ಅಭಿಪ್ರಯಾ ಪಟ್ಟ ಹಿನ್ನಲೆಯಲ್ಲಿ, ಸಾರ್ವಜನಿಕ ಶಿಕ್ಷಣ ಇಲಾಖೆ, ೧ ರಿಂದ ೯ನೇ ತರಗತಿ ವಿದ್ಯಾರ್ಥಿ ಗಳನ್ನು ಪರೀಕ್ಷೆ ಇಲ್ಲದೇ ಪಾಸ್ ಮಾಡುವುದಾಗಿ ತಿಳಿಸಿ ಆದೇಶಿಸಿದೆ.

ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ರಾಜ್ಯದಲ್ಲಿ ಕೊರೊನಾ ೨ನೇ ಅಲೆ ಯ ಅಬ್ಬರ ಹೆಚ್ಚಾಗುತ್ತಿದೆ. ಇದರ ನಡುವೆ ೧ ರಿಂದ ೯ನೇ ತರಗತಿ ವಿದ್ಯಾರ್ಥಿಗಳಿಗೆ ಸೋಂಕು ತಗುಲುವು ಭೀತಿ ಹೆಚ್ಚಿದೆ. ತಜ್ಞರು ಕೂಡ ಇದನ್ನೇ ಅಭಿಪ್ರಾಯ ಪಟ್ಟಿದ್ದಾರೆ. ಹೀಗಾಗಿ ರಾಜ್ಯ ದಲ್ಲಿನ ೧ ರಿಂದ ೯ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೇ ಈ ವರ್ಷ ಪಾಸ್ ಮಾಡಲಾಗುತ್ತಿದೆ ಎಂಬುದಾಗಿ ತಿಳಿಸಿದೆ.





ಈ ಮೂಲಕ ೧ ರಿಂದ ೯ನೇ ತರಗತಿ ವಿದ್ಯಾರ್ಥಿ ಗಳಿಗೆ ಪರೀಕ್ಷೆ ಇಲ್ಲದೇ ಈ ಬಾರಿ ಪಾಸ್ ಮಾಡಿದೆ.
ಇನ್ನು ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿ ಯುಸಿ ಪರೀಕ್ಷೆ ನಿಗದಿತ ವೇಳಾ ಪಟ್ಟಿಯಂತೆ ನಡೆ ಯಲಿದೆ ಎಂದು ಶಿಕ್ಷಣ ಇಲಾಖೆ ಸುತ್ತೊಲೆ ಹೊರಡಿ ಸಿದ್ದಾರೆ