ಅಣ್ಣ ನ ಹೆಸರಿನಲ್ಲಿ ತಮ್ಮನ ಶಿಕ್ಷಕ ವೃತ್ತಿ ಅಣ್ಣ ಮೃತನಾಗಿ 24 ವರ್ಷದ ನಂತರ ಬಯಲಾಯಿತು ಸತ್ಯ…..

Suddi Sante Desk

ಹುಣಸೂರು –

ಮೃತ ಅಣ್ಣನ ಹೆಸರಿನಲ್ಲಿ ಶಿಕ್ಷಕನಾಗಿ ತಮ್ಮನೊಬ್ಬ ಶಿಕ್ಷಕ ವೃತ್ತಿ ಮಾಡುತ್ತಿದ್ದು 24 ವರ್ಷಗಳ ನಂತರ ಈ ಒಂದು ಪ್ರಕರಣ ಬೆಳಕಿಗೆ ಬಂದಿರುವ ಘಟನೆ ಮೈಸೂರಿನ ಹುಣಸೂರಿನಲ್ಲಿ ನಡೆದಿದೆ.ಕಳೆದ 24 ವರ್ಷಗಳಿಂದ ಕೆಲಸ ಮಾಡುತ್ತಿದ್ದ ವ್ಯಕ್ತಿ ಈಗ ಕಂಬಿ ಎಣಿಸುವಂತಾಗಿದೆ. ಹುಣಸೂರು ತಾಲೂಕಿನ ಕಟ್ಟೆಮಳಲವಾಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹಶಿಕ್ಷಕನಾಗಿ ನೇಮಕಗೊಂಡಿದ್ದ ಲೋಕೇಶ್ ಗೌಡ ಹೆಸರಲ್ಲಿ ಆತನ ಕಿರಿಯ ಸಹೋದರ ಲಕ್ಷ್ಮಣೇಗೌಡ ಕೆಲಸ ಮಾಡುತ್ತಿದ್ದ. ಈಗ ಪ್ರಕರಣ ಬೆಳಕಿಗೆ ಬಂದಿದ್ದು, ಬಂಧಿತನಿಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ.

ಮೂಲತಃ ಕೆ.ಆರ್.ನಗರ ತಾಲೂಕು ಹೆಬ್ಬಾಳು ಗ್ರಾಮದಲ್ಲಿ ಲಕ್ಷ್ಮಣೇಗೌಡರ ಕುಟುಂಬ ವಾಸವಿದೆ.1994-95ರಲ್ಲಿ ಲಕ್ಷ್ಮಣೇಗೌಡರ ಹಿರಿಯ ಸಹೋದರ ಲೋಕೇಶ್ ಗೌಡ ಸರ್ಕಾರಿ ಶಿಕ್ಷಕ ಹುದ್ದೆಗೆ ಆಯ್ಕೆಯಾಗಿದ್ದರು.ಕೆಲಸಕ್ಕೆ ಹಾಜ ರಾಗುವ ಮುನ್ನವೇ ಅವರು ಅಕಾಲಿಕವಾಗಿ ಮೃತಪಟ್ಟರು. ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯ ನೇಮಕಾತಿ ಪತ್ರ ದೊಂದಿಗೆ ಲಕ್ಷ್ಮಣೇಗೌಡ ತಾನೇ ಲೋಕೇಶ್ ಎಂದು ಹೇಳಿ ಕೊಂಡು ಪಿರಿಯಾಪಟ್ಟಣದ ಮುದ್ದನಹಳ್ಳಿ ಗ್ರಾಮದ ಶಾಲೆ ಯಲ್ಲಿ ಕರ್ತವ್ಯ ಆರಂಭಿಸಿದ್ದ.ನಂತರದ ವರ್ಷಗಳಲ್ಲಿ ಜಿಲ್ಲೆಯ ಹಲವಾರು ಶಾಲೆಗಳಲ್ಲಿ ಕರ್ತವ್ಯ ಮುಂದುವರಿಸಿ ದ್ದರೂ ಇಲಾಖೆಗೆ ಇದು ಗೊತ್ತಾಗಲೇ ಇಲ್ಲ.2019ರಲ್ಲಿ ಹುಣಸೂರಿನ ಇಂಟೆಕ್ ರಾಜು ಅವರು ಈ ಕುರಿತು ಮಾಹಿತಿ ಲಭ್ಯವಾಗಿ ಜಾಡು ಹಿಡಿದು ಹೊರಟಾಗ ಅನು ಮಾನ ಮೂಡಿತು.ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಅವರು ದೂರು ನೀಡಿದರು

ಇನ್ನೂ ಈ ಒಂದು ಪ್ರಕರಣದಲ್ಲಿ ಆರೋಪಿ ಸೂಕ್ತ ಮತ್ತು ಅಧಿಕೃತ ದಾಖಲೆಗಳನ್ನು ಸಲ್ಲಿಸುವಲ್ಲಿ ವಿಫಲನಾಗಿರು ವುದು ಕಂಡು ಬಂದಿದ್ದು ಸಧ್ಯ ಈ ಒಂದು ವಿಚಾರ ಕುರಿತು ಇಲಾಖೆಯ ಅಧಿಕಾರಿಗಳು ಪೊಲೀಸರು ತನಿಖೆ ಮಾಡತಾ ಇದ್ದಾರೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.