ಚಿತ್ರದುರ್ಗ-
ನೀರಾವರಿ ಪಂಪ್ ಸೆಟ್‌ಗೆ ಅಕ್ರಮವಾಗಿ ಹಾಕಿಕೊಂಡಿದ್ದ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ ಬೆಸ್ಕಾಂ ಸಿಬ್ಬಂದಿಗೆ ಹಲ್ಲೆ ನಡೆಸಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.ಕಳೆದ ಹಲವು ದಿನಗಳಿಂದ ಶಿವರಾಜ್ ನಿಯಮಬಾಹಿರವಾಗಿ ವಿದ್ಯುತ್ ಸಂಪರ್ಕ ಹಾಕಿಕೊಂಡಿದ್ದರು. ಈ ಬಗ್ಗೆ ಬೆಸ್ಕಾಂ ಸಿಬ್ಬಂದಿ ಕೇಶವ ಅವರು ಶಿವರಾಜ್ಗೆಗ ಎಚ್ಚರಿಕೆ ನೀಡಿದ್ದರು. ಆದರೆ ನಿನ್ನೆ ಆಕಸ್ಮಿಕವಾಗಿ ಸ್ಥಳಕ್ಕೆ ಭೇಟಿ ನೀಡಿದ್ದಾಗಲು ಅಕ್ರಮ ಲೈನ್ ಮುಂದುವರೆಸಿದ್ದ. ಮಾಹಿತಿ ತಿಳಿದ ಬೆಸ್ಕಾಂ ಸಿಬ್ಬಂದ್ದಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿ ಬೆಸ್ಕಾಂ ಕಚೇರಿಗೆ ಹಿಂತಿರುಗಿದ್ದರು.ಇದರಿಂದ ಆಕ್ರೋಶಗೊಂಡ ಶಿವರಾಜ್ ಬೆಸ್ಕಾಂ ಕಚೇರಿ ಬಳಿ ದಾಂಧಲೆ ನಡೆಸಿದ್ದಾರೆ.

ಬೆಸ್ಕಾಂ ಕಚೇರಿ ಮುಂಭಾಗದಲ್ಲೇ ಮಾರಕಾಸ್ತ್ರಗಳನ್ನು ತೋರಿಸಿ ಪ್ರಾಣ ಬೆದರಿಕೆ ಹಾಕಿದ್ದಾರಂತೆ. ಬಳಿಕ ದಿಢೀರ್ ಎಂದು ಬೈಕ್ ನಲ್ಲಿದ್ದ ಮಾರಾಕಾಸ್ತ್ರ ತೆಗೆದ ಶಿವರಾಜ್, ಬೆಸ್ಕಾಂ ಸಿಬ್ಬಂದಿಯಾಗಿರುವ ಕೇಶವ ಅವರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ ಎನ್ನಲಾಗಿದೆ. ಸದ್ಯ ವಿಡಿಯೋ ಇದೀಗ ವೈರಲ್ ಆಗಿದ್ದು, ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.