ಪೊಲೀಸ್ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಪ್ರತಾಪ್‌ ರೆಡ್ಡಿ ಅಧಿಕಾರ ಹಸ್ತಾಂತರ ಮಾಡಿ ನಿರ್ಗಮಿಸಿದ ಕಮಲ್ ಪಂತ್…..

Suddi Sante Desk

ಬೆಂಗಳೂರು

ರಾಜಧಾನಿ ಬೆಂಗಳೂರಿನ ನೂತನ ಪೊಲೀಸ್ ಆಯುಕ್ತ ರಾಗಿ ಎಡಿಜಿಪಿ ಸಿ.ಎಚ್.ಪ್ರತಾಪ್ ರೆಡ್ಡಿ ಅಧಿಕಾರ ವಹಿಸಿ ಕೊಂಡರು.ಹೌದು ನಿರ್ಗಮಿತ ಕಮಿಷನರ್ ಕಮಲ್ ಪಂತ್ ಅವರು ನೂತನ ಪೊಲೀಸ್ ಆಯುಕ್ತರಿಗೆ ಅಧಿಕಾರ ಹಸ್ತಾಂತರಿಸಿದರು.1991ನೇ ಬ್ಯಾಚ್‌ ಐಪಿಎಸ್ ಅಧಿಕಾರಿ ಯಾಗಿರುವ ಇವರು ಆಂಧ್ರಪ್ರದೇಶದ ಗುಂಟೂರು ಜಿಲ್ಲೆ ಮೂಲದ ಪ್ರತಾಪ್ರೆಡ್ಡಿ,ಬೆಂಗಳೂರು ನಗರದ 35ನೇ ಕಮಿಷನರ್ ಆಗಿ ಅಧಿಕಾರ ಸ್ವೀಕರಿಸಿದರು.

ಬೆಂಗಳೂರಿನ ನ್ಯಾಷನಲ್ ಅಸೋಸಿಯೇಷನ್ ಆಫ್ ಸಾಫ್ಟ್ ವೇರ್ ಆ್ಯಂಡ್ ಸರ್ವೀಸಸ್ ಕಂಪನೀಸ್(ಸೈಬರ್ ಸೆಕ್ಯೂರಿಟಿ ವಿಂಗ್)ಸಲಹೆಗಾರರಾಗಿ ಪ್ರತಾಪ್ ರೆಡ್ಡಿ ಕಾರ್ಯ ನಿರ್ವಹಿಸಿದ್ದರು.1994ರಲ್ಲಿ ಮುಖ್ಯಮಂತ್ರಿಗಳ ಪದಕಕ್ಕೆ ಭಾಜನರಾಗಿದ್ದರು.ಕೆಲ ಕಾಲ ಸೈಬರ್ ಸೆಕ್ಯೂರಿಟಿ ವಿಭಾಗದ ನಿರ್ದೇಶಕರಾಗಿದ್ದರು.ತಾಂತ್ರಿಕ ಕಾರ್ಯಾಚರಣೆ ಗಳಲ್ಲಿ ಪರಿಣತಿ ಹೊಂದಿರುವ ವಿರಳ ಐಪಿಎಸ್ ಅಧಿಕಾರಿ ಗಳಲ್ಲಿ ಇವರೂ ಒಬ್ಬರಾಗಿದ್ದಾರೆ.ವಿಜಯಪುರ,ಕಲಬುರ ಗಿಯಲ್ಲಿ ಎಸ್ಪಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.

ಸಿಬಿಐ ಸೇವೆಗೂ ತೆರಳಿದ್ದ ಸಂದರ್ಭ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಭಾರಿ ಪ್ರಮಾಣದ ಬ್ಯಾಂಕಿಂಗ್,ಸೆಕ್ಯೂರಿಟಿ ವಂಚನೆ ಬೇಧಿಸಿ ಆರೋಪಿಗಳನ್ನು ಸೆರೆಹಿಡಿಯುವಲ್ಲಿ ಪ್ರತಾಪ್ರೆಡ್ಡಿ ಪ್ರಮುಖ ಪಾತ್ರ ವಹಿಸಿ ದ್ದರು.ಕೊಲೆ,ಕಳ್ಳತನ,ಮಹಿಳೆಯರ ವಿರುದ್ಧದ ಅಪರಾಧ ಗಳು,ಹಣಕಾಸಿನ ವಂಚನೆಗಳ ತನಿಖೆಗಳು,ಸರ್ಕಾರಿ ಸಂಸ್ಥೆ ಗಳಿಂದ ಹಕ್ಕುಗಳ ಉಲ್ಲಂನೆ ಸೇರಿ ಹಲವು ಅಪರಾಧ ಪ್ರಕರಣಗಳನ್ನು ಬೇಧಿಸಿ ಆರೋಪಿಗಳಿಗೆ ಶಿಕ್ಷೆ ಕೊಡಿ ಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು.ಆಂತರಿಕ ಭದ್ರತೆ, ಅಗ್ನಿಶಾಮಕ ಮತ್ತು ತುರ್ತು ಸೇವೆ ವಿಭಾಗದ ಎಡಿಜಿಪಿ ಯಾಗಿ ಕಾರ್ಯ ನಿರ್ವಹಿಸಿರುವ ಅನುಭವ ಹೊಂದಿದ್ದಾರೆ. ಪ್ರಸ್ತುತ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದಲ್ಲಿ ಪ್ರತಾಪ್ರೆಡ್ಡಿ ಕಾರ್ಯ ನಿರ್ವಹಿಸುತ್ತಿದ್ದರು.

ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಬಳಿಕ 2020ರ ಆಗಸ್ಟ್ ನಲ್ಲಿ ನಗರ ಪೊಲೀಸ್ ಆಯುಕ್ತರಾಗಿ ನೇಮಕಗೊಂಡಿದ್ದ ಕಮಲ್ ಪಂತ್ ಇಲಾಖೆಯಲ್ಲಿ ಗಮನಾರ್ಹ ಸುಧಾರಣೆ ತಂದಿದ್ದರು.ನಗರ ಪೊಲೀಸ್ ಆಯುಕ್ತರಾಗಿ 22 ತಿಂಗಳು ಸೇವೆ ಸಲ್ಲಿಸಿದ್ದರು. ಕೆ.ಜಿ ಹಳ್ಳಿ-ಡಿ.ಜೆ.ಹಳ್ಳಿ ಗಲಭೆ ಪ್ರಕರಣವನ್ನು ಯಶಸ್ವಿಯಾಗಿ ನಿಭಾಯಿಸಿದ್ದರು.ರೌಡಿ ಚಟುವಟಿಕೆ,ಡ್ರಗ್ಸ್ ನಿಯಂತ್ರಣಕ್ಕೆ ಕಡಿವಾಣ ಹಾಕಿದ್ದರು.ಸೈಬರ್ ಕ್ರೈಂ ತಡೆಗೆ ಶ್ರಮಿಸಿದ್ದರು. ಕೋವಿಡ್ ಸಂದರ್ಭದಲ್ಲಿ ಬೆಂಗಳೂರು ನಗರದ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇವರ ಅವಧಿಯಲ್ಲಿ ಬೆಳಕಿಗೆ ಬಂದ ಬಿಟ್ಕಾಯಿನ್ ಪ್ರಕರಣ ದೇಶಾದ್ಯಂತ ಭಾರಿ ಸದ್ದು ಮಾಡಿತ್ತು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.