ಹುಬ್ಬಳ್ಳಿ –
ಕೋವಿಡ್ – 19 ರ 2 ನೇ ಅವಧಿಯ ಅಲೆಯಲ್ಲಿ ಬಹಳಷ್ಟು ಶಿಕ್ಷಕರು ಕೋವಿಡ್ ಸೋಂಕಿನಿಂದ ಸಾವಿಗೀಡಾಗುತ್ತಿದ್ದಾರೆ ಶಿಕ್ಷಣ ಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಶಿಕ್ಷಕರನ್ನು ಕೋರೊನಾ ವಾರಿಯರ್ಸ್ ಅಂತ ಪರಿಗಣಿಸಿ ಅವರಿಗೆ ಸರಕಾರಿ ಸೌಲಭ್ಯಗಳನ್ನು ಒದಗಿಸುವಂತೆ ಕರ್ನಾಟಕ ಸರಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಒತ್ತಾಯಿಸಿದೆ.ರಾಜ್ಯ ಘಟಕ ಹುಬ್ಬಳ್ಳಿಯ ಅಧ್ಯಕ್ಷರು,ಪ್ರಧಾನ ಕಾರ್ಯದರ್ಶಿಗಳು ಹಾಗೂ ಸರ್ವ ಹಂತದ ಸಮಸ್ತ ಪದಾಧಿಕಾರಿಗಳು ಈ ಕುರಿತು ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ

ಕೋವಿಡ್ -19 ರ 2 ನೇ ಅವಧಿಯ ಅಲೆಯಲ್ಲಿ ಬಹಳಷ್ಟು ಶಿಕ್ಷಕರು ಕೋವಿಡ್ ಸೋಂಕಿನಿಂದ ಸಾವಿಗೀಡಾಗುತ್ತಿದ್ದಾರೆ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲಾ ಶಿಕ್ಷಕರನ್ನು ಕೊರೋನಾ ವಾರಿಯರ್ಸ್ ಅಂತ ಪರಿಗಣಿಸಬೇಕು ಅಲ್ಲದೇ ಈಗಾಗಲೇ ಕೊರೋನಾ ಸೋಂಕಿನಿಂದ ಮೃತರಾದ ಶಿಕ್ಷಕರನ್ನು ಕೊರೋನಾ ವಾರಿಯರ್ಸ್ ಅಂತ ಪರಿಗಣಿಸಿ, ಕೂಡಲೇ ಸರ್ಕಾರವು ಮೃತರಾದ ಶಿಕ್ಷಕರ ಕುಟುಂಬಗಳಿಗೆ 50 ಲಕ್ಷ ರೂಪಾಯಿ ಕೋವಿಡ್ ವಿಮೆಯನ್ನು ಮಂಜೂರು ಮಾಡಬೇಕು ಹಾಗೇ ಈಗಾಗಲೇ ಕೋವಿಡ್ ಕರ್ತವ್ಯ ನಿಯೋಜನೆಗೊಂಡ ಶಿಕ್ಷಕರಿಗೆ ಸನ್ಮಾನ್ಯ ಜಿಲ್ಲಾಧಿಕಾರಿಗಳು ತಹಶಿಲ್ದಾರರು ಆದೇಶ ಮಾಡಬೇಕು ಅವರಿಗೆ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು ಸಾಧ್ಯವಿದ್ದ ಮಟ್ಟಿಗೆ ಮನೆಯಲ್ಲಿಯೆ ಕೆಲಸ ಕಾರ್ಯಗಳ ಹಂಚಿಕೆ ಮಾಡಬೇಕೆಂದು ಈ ಮೂಲಕ ಕರ್ನಾಟಕ ಸರಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಅಶೋಕ ಸಜ್ಜನ ಪ್ರಧಾನ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ ಉಪ್ಪಿನ್ ಗೌರವಾಧ್ಯಕ್ಷರಾದ ಎಲ್ ಐ ಲಕ್ಕಮ್ಮನವರ ಕೋಶಾಧ್ಯಕ್ಷರಾದ ಎಸ್ ಎಫ್ ಪಾಟೀಲ್ ಕಾರ್ಯಾಧ್ಯಕ್ಷರಾದ ಶರಣಪ್ಪ ಗೌಡ ಆರ್ ಕೆ ಮಹಾಪೋಷಕರಾದ ಪವಾಡಪ್ಪ ಕಾಂಬ್ಳೆ ಉಪಾಧ್ಯಕ್ಷರುಗಳಾದ ಗೋವಿಂದ ಜುಜಾರೆ ಹನುಮಂತಪ್ಪ ಮೇಟಿ. ಡಿ.ಎಸ್.ಭಜಂತ್ರಿ.ಕುಕನೂರ.ರಾಮಪ್ಪ ಹಂಡಿ ಎಮ್ ಆಯ್ ಮುನವಳ್ಳಿ ಮಹ್ಮದ್ ರಫಿ ಡಿ ಟಿ ಬಂಡಿವಡ್ಡರ ರಾಜ್ಯ ಪದಾಧಿಕಾರಿಗಳಾದ ಶರಣಬಸವ ಬನ್ನಿಗೋಳ.ಎಂ.ವಿ ಕುಸುಮಾ. ರಾಜಶ್ರೀ ಪ್ರಭಾಕರ್ ಜಿ ಟಿ ಲಕ್ಷ್ಮೀದೇವಮ್ಮ ಕಲ್ಪನಾ ಚಂದನಕರ. ರವಿ ಬಂಗೆನ್ನವರ ಶಿವರಡ್ಡಿ .ಅಶೋಕ.ಬಿಸೆರೊಟ್ಟಿ ನಾಗರಾಜ್ ಆತಡಕರ ನಾಗರಾಜ್ ಕೆ .ರೇಖಾ ದೇವಿ ದೇವಿಕಾ ಕಮ್ಮಾರ ಮುಂತಾದ ಪದಾಧಿಕಾರಿಗಳು ಮುಖ್ಯ ಮಂತ್ರಿಗಳವರಿಗೆ ಶಿಕ್ಷಣ ಸಚಿವರಿಗೆ ಹಾಗೂ ಆ
ರೋಗ್ಯ ಸಚಿವರಿಗೆ ಆಗ್ರಹ ಮಾಡಿದ್ದಾರೆ