ಬೆಂಗಳೂರು –
ಮಹಾಮಾರಿ ಕೋವಿಡ್ ಹಿನ್ನೆಲೆಯಲ್ಲಿ ರಾಜ್ಯಾದ್ಯಂ ತ ಶಾಲೆಗಳಿಗೆ ರಜೆ ನೀಡಲಾಗಿದೆ. ಇನ್ನೂ ಪ್ರಸಕ್ತ ಸನ್ನಿವೇಶವನ್ನು ಗಮನದಲ್ಲಿರಿಸಿ 2020-21 ನೇ ಸಾಲಿನ ರಜಾವಧಿಯನ್ನು ಪರಿಷ್ಕರಿಸಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.ಈ ಒಂದು ಕುರಿತು ಪರಿಷ್ಕೃತ ಮತ್ತೊಂದು ಆದೇಶ ವನ್ನು ಇಲಾಖೆಯಿಂದ ಹೊರಡಿಸಲಾಗಿದೆ
ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಜೂನ್ 14 ರವರೆಗೆ ರಜೆ ನೀಡಲಾಗಿದ್ದು ಜೂನ್ 15 ರಿಂದ 2021-22 ನೇ ಸಾಲಿನ ಶಾಲೆಗಳು ಆರಂಭವಾ ಗಲಿದೆ. ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಮೇ 31 ರವರೆಗೆ ರಜೆ ನೀಡಲಾಗಿದೆ ಇದನ್ನು ಪರಿಷ್ಕೃತ ಆದೇಶದಲ್ಲಿ ಉಲ್ಲೇಖ ಮಾಡಲಾಗಿದೆ
ಪ್ರೌಢಶಾಲಾ ಶಿಕ್ಷಕರು ರಜೆ ಅವಧಿಯಲ್ಲಿ SSLC ಮಕ್ಕಳ ಪರೀಕ್ಷಾ ಸಿದ್ಧತೆಯ ಬಗ್ಗೆ ಗಮನ ಹರಿಸ ಬೇಕು ದೂರವಾಣಿ ಮೂಲಕ ಸಂಪರ್ಕದಲ್ಲಿದ್ದು ಅವರ ಕಲಿಕೆಗೆ ಪ್ರೇರೇಪಿಸಬೇಕು ಎಂದು ಇಲಾಖೆ ಯ ಸುತ್ತೋಲೆಯಲ್ಲಿ ವಿವರಿಸಲಾಗಿದೆ
ಇನ್ನೂ ಜೂನ್ 1 ರಿಂದ 14 ರವರೆಗೆ SSLC ವಿದ್ಯಾ ರ್ಥಿಗಳಿಗಾಗಿ ಪುನರ್ಮನನ ತರಗತಿಗಳು ನಡೆಯ ಲಿವೆ.ಜೂನ್ 15 ರಿಂದ 8-10 ನೇ ತರಗತಿಗಳು ಪ್ರಾರಂಭವಾಗಲಿವೆ ಎಂದು ಹೊಸ ಸುತ್ತೋಲೆ ಯಲ್ಲಿ ಸಂಪೂರ್ಣವಾಗಿ ಉಲ್ಲೇಖ ಮಾಡಲಾಗಿದೆ